Sunday, September 14, 2025

ನಟ ದರ್ಶನ್ ಪತ್ನಿಗೆ ಅಸಭ್ಯ ಕಮೆಂಟ್: ಪೊಲೀಸರ ಎರಡು ನೊಟೀಸ್ ಗೂ ಸಿಗದ ಉತ್ತರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಕೆಡಿಗೇಡಿಗಳು ಅಸಭ್ಯ ಕಮೆಂಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡುವಂತೆ ವಿಜಯಲಕ್ಷ್ಮಿ ಅವರಿಗೆ ಪೊಲೀಸರು ಎರಡು ಬಾರಿ ನೊಟೀಸ್ ಕಳಿಸಿದ್ದಾರೆ. ಆದರೆ ಈ ಎರಡೂ ನೊಟೀಸ್ ​​ಗಳಿಗೆ ಅವರು ಉತ್ತರ ನೀಡಿಲ್ಲ.

ಘಟನೆ ಬಗ್ಗೆ ಹೇಳಿಕೆ ದಾಖಲಿಸಿಕೊಳ್ಳಲು ಚೆನ್ನಮ್ಮನಕರೆ ಅಚ್ಚುಕಟ್ಟು ಪೊಲೀಸರಿಂದ ನೊಟೀಸ್ ಕಳಿಸಲಾಗಿದೆ. ಪೊಲೀಸರ ನೊಟೀಸ್​​ಗಳಿಗೆ ವಿಜಯಲಕ್ಷ್ಮಿ ಅವರು ಕ್ಯಾರೇ ಎನ್ನುತ್ತಿಲ್ಲ.

ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಕೆಟ್ಟ ಕಮೆಂಟ್​​ಗಳು ಬಂದಿವೆ ಎಂದು ಮಹಿಳಾ ಆಯೋಗಕ್ಕೆ ದೂರು ನೀಡಲಾಗಿತ್ತು. ಹಾಗಾಗಿ ಮಹಿಳಾ ಆಯೋಗದಿಂದ ಸುಮೋಟೊ ಪ್ರಕರಣ ದಾಖಲಿಸುವಂತೆ ಸೂಚನೆ ನೀಡಲಾಗಿತ್ತು. ಎರಡು ನೊಟೀಸ್​​ಗಳಿಗೂ ವಿಜಯಲಕ್ಷ್ಮಿ ಅವರಿಂದ ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ಈಗ ಮೂರನೇ ನೊಟೀಸ್ ನೀಡಲು ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರ ಸಿದ್ಧತೆ ಮಾಡಿಕೊಂಡಿದ್ದಾರೆ.

ಒಂದು ವೇಳೆ, ಮೂರನೇ ನೊಟೀಸ್​ಗೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದಾದರೆ ಪೊಲೀಸರು ಈ ಪ್ರಕರಣವನ್ನು ಮುಕ್ತಾಯ ಮಾಡಲಿದ್ದಾರೆ. ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ. ಹೀಗಾಗಿ ಈಗಲಾದರೂ ವಿಜಯಲಕ್ಷ್ಮಿ ಅವರು ನೊಟೀಸ್​​ಗೆ ಪ್ರತಿಕ್ರಿಯಿಸುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು.

ಇದನ್ನೂ ಓದಿ