ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಟ ದರ್ಶನ್ ಬೆನ್ನುನೋವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಒಳಗೆ ದರ್ಶನ್ ಇರುವ ಫೋಟೊ ಒಂದು ಇದೀಗ ವೈರಲ್ ಆಗಿದೆ.
ಬೆನ್ನು ನೋವಿನಿಂದ ಹೊರ ಬರೋಕೆ ಅವರಿಗೆ ಶಸ್ತ್ರಚಿಕಿತ್ಸೆ ಒಂದೇ ದಾರಿ ಎಂದು ಆಸ್ಪತ್ರೆಯ ವೈದ್ಯರು ವರದಿ ನೀಡಿದರು. ಶಸ್ತ್ರಚಿಕಿತ್ಸೆ ಮಾಡಿಸದೇ ಇದ್ದರೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ಕೂಡ ನೀಡಲಾಯಿತು. ಹೀಗಾಗಿ, ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಸದ್ಯ ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಜಿಎಸ್ನ ವಿಶೇಷ ಕೋಣೆಯಲ್ಲಿ ದರ್ಶನ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಅಧಿಕ ರಕ್ತದೊತ್ತಡ ಇರುವ ಕಾರಣ ದರ್ಶನ್ಗೆ ಇನ್ನೂ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ ಎಂದು ವೈದ್ಯರ ವರದಿ ಹೇಳಿದೆ. ಈಗ ಅವರು ಚಿಕಿತ್ಸೆ ಪಡೆಯುತ್ತಿರುವ ಫೋಟೋ ಸಿಕ್ಕಿದೆ.