October 9, 2026
Friday, October 9, 2026
spot_img

ನಟ ದರ್ಶನ್ ಪುತ್ರನ ಕಾರು ಅಪಘಾತ: ಸ್ಕೂಟರ್‌ಗೆ ಹಿಂಬದಿಯಿಂದ ಗುದ್ದಿದ ವಿನೀಶ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ನಟ ದರ್ಶನ್ ಜೈಲು ಪಾಲಾಗಿರುವ ಬೆನ್ನಲ್ಲೇ, ಅವರ ಕುಟುಂಬಕ್ಕೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.  ದರ್ಶನ್ ಪುತ್ರ ವಿನೀಶ್ ಚಲಾಯಿಸುತ್ತಿದ್ದ ಐಷಾರಾಮಿ ಕಾರು ರಸ್ತೆ ಅಪಘಾತಕ್ಕೀಡಾಗಿದೆ.

ಸ್ಕೂಟರ್‌ಗೆ ಗುದ್ದಿದ ಎಂಡೀವರ್!

ರಾಜರಾಜೇಶ್ವರಿ ನಗರದ ಮುಖ್ಯ ರಸ್ತೆಯಲ್ಲಿ ವಿನೀಶ್ ಚಲಾಯಿಸುತ್ತಿದ್ದ ಫೋರ್ಡ್ ಎಂಡೀವರ್  ಕಾರು ವೇಗವಾಗಿ ಬಂದು ರಸ್ತೆಯಲ್ಲಿ ಮುಂಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟರ್‌ಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ದ್ವಿಚಕ್ರ ವಾಹನಕ್ಕೆ ಭಾರೀ ಹಾನಿಯಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಸ್ಥಳೀಯರ ಆಕ್ರೋಶ; ರಸ್ತೆಯಲ್ಲೇ ಮಾತಿನ ಚಕಮಕಿ!

ಅಪಘಾತ ನಡೆದ ತಕ್ಷಣವೇ ಎಚ್ಚೆತ್ತ ಸಾರ್ವಜನಿಕರು ಮತ್ತು ಸ್ಥಳೀಯ ನಿವಾಸಿಗಳು ವಿನೀಶ್ ಇದ್ದ ಐಷಾರಾಮಿ ಕಾರನ್ನು ತಡೆದು ನಿಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕಾರಿನಿಂದ ಕೆಳಗಿಳಿದ ದರ್ಶನ್ ಪುತ್ರ ವಿನೀಶ್ ಹಾಗೂ ಸ್ಥಳೀಯರ ನಡುವೆ ತೀವ್ರ ಮಾತಿನ ಚಕಮಕಿ ಮತ್ತು ವಾಗ್ವಾದ ನಡೆದಿದೆ. ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ.

Must Read