ನಟ ದರ್ಶನ್‌ ಸ್ಥಳಾಂತರ ಯಾವುದೇ ರಾಜಕೀಯ ಪ್ರೇರಿತವಿಲ್ಲ: ಸಚಿವ ಎನ್.ಎಸ್.ಬೋಸರಾಜು

ಹೊಸದಿಗಂತ ವರದಿ,ರಾಯಚೂರು :

ನಟ ದರ್ಶನ್‌ರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವುದಕ್ಕೆ ನ್ಯಾಯಾಲಯ ಆದೇಶದ ಮೇರೆಗೆ ಸ್ಥಳಾಂತರಿಸಲಾಗುತ್ತಿದೆ ವಿನಃ ಇದರಲ್ಲಿ ಯಾವುದೇ ರಾಜಕೀಯ ಪ್ರೇರಿತವಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಹೇಳಿದರು.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ಕಾನೂನು ಬಾಹೀರವಾಗಿ ನೀಡಲಾಗುತ್ತಿದ್ದ ಸೌಲಭ್ಯಗಳ ಕುರಿತು ಬೆಳಕಿಗೆ ಬಂದ ತಕ್ಷಣ ಅಧಿಕಾರ ದುರುಪಯೋಗ ಪಡೆಸಿಕೊಂಡು ಅದಕ್ಕೆ ಬೆಂಬಲ ನೀಡಿದ ಎಲ್ಲ ಅಧಿಕಾರಿಗಳನ್ನು ಇಗಾಗಲೇ ಸರ್ಕಾರ ಅಮಾನತ್ ಮಾಡಿದೆ ಎಂದರು.

ಕುಮಾರಸ್ವಾಮಿಯವರ ಹೇಳಿಕೆಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವ ಅವಶ್ಯಕತೆ ಇಲ್ಲ. ಅವರು ಹಿಟ್ ಅಂಡ್ ರನ್ ಕೇಸ್ ಅವರದ್ದು, ತಮ್ಮ ಮಗ ಸೇರಿ ಬರೀ ಸುಳ್ಳಿನ ರಾಜಕೀಯ ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರವನ್ನು ಇನ್ನು ಆರು ತಿಂಗಳಲ್ಲಿ ಕೆಡವುವದಾಗಿ ಅಮಿತ್ ಶಾಅವರಿಗೆ ಆಶ್ವಾಸನೇ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಪ್ರತಿ ನಿತ್ಯ ಒಂದಿಲ್ಲೊoದು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಸರ್ಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ಕುಮಾರಸ್ವಾಮಿಯವರು ಮಾಡುತ್ತಿದ್ದಾರೆ. ಅವರೊಬ್ಬ ಮುಖ್ಯಮಂತ್ರಿಯಾಗಿದ್ದವರು ಅವರು ಈ ರೀತಿ ಹೇಳಿಕೆಗಳನ್ನು ನೀಡುವುದು ಅವರ ಘನತೆಗೆ ತಕ್ಕುದಾವುಗಳಲ್ಲ ಎಂದು ಹೇಳಿದರು.

ಇಡಿ, ಸಿಬಿಐ ಸಂಸ್ಥೆಗಳನ್ನು ಬಿಟ್ಟರಲ್ಲದೆ ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಕೆಲಸಕ್ಕೂ ಕೈಹಾಕಿದ್ದರು. ಆದರೆ ಅವೆಲ್ಲ ಕೆಲಸಗಳು ಸಫಲವಾಗದ ಹಿನ್ನಲೆಯಲ್ಲಿ ರಾಜಕೀಯದಲ್ಲಿ ಇಂದಿನವರೆಗೂ ಯಾವುದೇ ಕಪ್ಪು ಚುಕ್ಕೆ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಲ್ಲದ ಆರೋಪಗಳನ್ನು ಹೋರಿಸುವ ಮೂಲಕ ಅವರಿಗೆ ಮಸಿಬಳಿಯುವ ಕೆಲಸದೊಂದಿಗೆ ತೊಂದರೆ ಕೊಡುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ದೂರಿದರು.

ಆದರೆ, ಸಿದ್ದರಾಮಯ್ಯ ಅವರ ವಿರುದ್ಧ ಮಾಡುತ್ತಿರುವ ಆಪಾದನೆಗಳೆಲ್ಲ ಸುಳ್ಳು ಎನ್ನುವುದು ಜನತೆಗೆ ಅರ್ಥವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿಂದೆ ಹೈಕಮಾಂಡ್, ಇಡೀ ಪಕ್ಷ ಮತ್ತು ಎಲ್ಲ ಶಾಸಕರೂ ಇದ್ದಾರೆ ಕುಮಾರಸ್ವಾಮಿ ಅವರಂತಹವರು ನೂರು ಜನ ಬಂದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏನೂ ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ ಎಂದರು.

ಈ ಸಂದರ್ಭದಲ್ಲಿ ಸಂಸದ ಜಿ.ಕುಮಾರ ನಾಯಕ ಸೇರಿದಂತೆ ಅನೇಕರಿದ್ದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!