ಕೆಂಪುಕೋಟೆ ಗಲಭೆ ಪ್ರಕರಣದ ಆರೋಪಿ, ನಟ ದೀಪ್‌ ಸಿಧು ರಸ್ತೆ ಅಪಘಾತದಲ್ಲಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಪಂಜಾಬಿ ನಟ ದೀಪ್‌ ಸಿಧು ಮೃತಪಟ್ಟಿದ್ದಾರೆ.

ದೆಹಲಿಯಿಂದ ಪಂಜಾಬ್‌ನ ಭಟಿಂಡಾಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮಂಗಳವಾರ ರಾತ್ರಿ ಟ್ರೈಲರ್ ಟ್ರಕ್‌ ಗೆ ಕಾರು ಡಿಕ್ಕಿ ಹೊಡೆದಿದೆ. ಗಾಯಗೊಂಡ ಸಿಧುರನ್ನು ಆಸ್ಪತ್ರೆಗೆ ತರುವಾಗಲೇ ಅವರು ಮೃತಪಟ್ಟಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ಜನವರಿ 26 ರಂದು ರೈತ ಸಂಘಟನೆಗಳು ಆಯೋಜಿಸಿದ್ದ ‘ಟ್ರ್ಯಾಕ್ಟರ್ ರ‍್ಯಾಲಿ’ಯಲ್ಲಿ ದೆಹಲಿಯ ಕೆಂಪುಕೋಟೆಯ ಬಳಿ ಕೆಲವರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ್ದರು. ಇದೇ ವೇಳೆ ಕೆಲವರು ಕೆಂಪು ಕೋಟೆಗೆ ನುಗ್ಗಿ, ಪೊಲೀಸರನ್ನು ಗಾಯಗೊಳಿಸಿದ್ದರು. ಈ ಘಟನೆಯಲ್ಲಿ ನಟ ಸಿಧುಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ ದೆಹಲಿ ಹೈ ಕೋರ್ಟ್‌ ಜಾಮೀನು ನೀಡಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!