ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಡಾಲಿ ಧನಂಜಯ್ ಮತ್ತು ಭಾವಿ ಪತ್ನಿ ಧನ್ಯತಾ ಜೊತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಧನಂಜಯ್ ಅವರ ವಿವಾಹದ ನಿಮಿತ್ತ ಚಾಮುಂಡೇಶ್ವರಿ ದೇವಿ ದರುಶನ ಪಡೆದರು. ಬಳಿಕ ಲಗ್ನ ಪತ್ರಿಕೆಗೆ ವಿಶೇಷ ಪೂಜೆ ಸಲ್ಲಿಸಿದರು.
ದೇವರ ದರ್ಶನದ ಬಳಿಕ ಮಾತನಾಡಿದ ಡಾಲಿ, ಮದುವೆಗೆ ಸಿದ್ಧತೆಗಳು ನಡೆಯುತ್ತಿವೆ. ಲಗ್ನ ಪತ್ರಿಕೆ ಕೊಡುವುದನ್ನು ಶುರು ಮಾಡಿದ್ದೇನೆ. ಇಂದು ಚಾಮುಂಡಿ ಬೆಟ್ಟದಲ್ಲಿ ಲಗ್ನ ಪತ್ರಿಕೆಗೆ ಪೂಜೆ ಸಲ್ಲಿಸಿದ್ದೇನೆ. ಎಲ್ಲರಿಗೂ ಲಗ್ನ ಪತ್ರಿಕೆ ಕೊಡುತ್ತೇನೆ ಎಂದು ತಿಳಿಸಿದರು.