ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತಮಿಳು ನಟ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ಈಗಾಗಲೇ ತಮ್ಮ ಪ್ರತ್ಯೇಕತೆಯನ್ನು ಘೋಷಿಸಿದ್ದು, ಇಂದು ವಿಚ್ಛೇದನಕ್ಕಾಗಿ ಚೆನ್ನೈ ಕೌಟುಂಬಿಕ ನ್ಯಾಯಾಲಯಕ್ಕೆ ಮೊದಲ ಬಾರಿಗೆ ಹಾಜರಾಗಿದ್ದಾರೆ.
2022ರಲ್ಲಿ ಧನುಷ್ ಮತ್ತು ಐಶ್ವರ್ಯ ತಮ್ಮ ಪ್ರತ್ಯೇಕತೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದ್ದರು. ಅಂದೇ ಮಾಜಿ ದಂಪತಿಗಳು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಇಬ್ಬರು ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗಿದ್ದು ಇದರ ಬೆನ್ನಲ್ಲೇ ಇಬ್ಬರು ರಾಜಿ ಮಾಡಿಕೊಳ್ಳಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.
ಐಶ್ವರ್ಯಾ ಮತ್ತು ಧನುಷ್ ವಿಚಾರಣೆಯ ನಂತರ, ನ್ಯಾಯಾಧೀಶರು ನವೆಂಬರ್ 27 ಅನ್ನು ಮುಂದಿನ ದಿನಾಂಕವನ್ನಾಗಿ ನೀಡಿದ್ದು, ಅಂದೇ ಧನುಷ್-ಐಶ್ವರ್ಯಾ ವಿಚ್ಛೇದನದ ಅಂತಿಮ ಆದೇಶ ನೀಡಲಿದೆ ಎಂದು ಹೇಳಲಾಗುತ್ತಿದೆ.
2004ರಲ್ಲಿ ಧನುಷ್ ಮತ್ತು ಐಶ್ವರ್ಯಾ ರಜನಿಕಾಂತ್ ಚೆನ್ನೈನಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. 2022ರ ಜನವರಿ 17ರಂದು ಇಬ್ಬರೂ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ವಿಚ್ಛೇದನವನ್ನು ಘೋಷಿಸಿದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.