Wednesday, November 12, 2025

ನಟ ಧರ್ಮೇಂದ್ರ ಆಸ್ಪತ್ರೆಯಿಂದ ಡಿಸ್ಚಾರ್ಜ್: ಮನೆಯಲ್ಲಿಯೇ ಚಿಕಿತ್ಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಲಿವುಡ್‌ ಧರ್ಮೇಂದ್ರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂದು ವೈದ್ಯರು ಬುಧವಾರ ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ.

ಪುತ್ರರಾದ ಸನ್ನಿ ಡಿಯೋಲ್ ಮತ್ತು ಬಾಬಿ ಡಿಯೋಲ್ ಸೇರಿದಂತೆ ಅವರ ಕುಟುಂಬವು ನಟನನ್ನು ಮನೆಗೆ ಕರೆದುಕೊಂಡು ಹೋಗಲು ನಿರ್ಧರಿಸಿದೆ ಎನ್ನಲಾಗಿದೆ. ವರದಿಯ ಪ್ರಕಾರ ಧರ್ಮೇಂದ್ರ ಅವರನ್ನು ಬೆಳಗ್ಗೆ 7.30ರ ಸುಮಾರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎನ್ನಲಾಗಿದೆ. ಕುಟುಂಬವು ಅವರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲು ನಿರ್ಧರಿಸಿದೆ ಎಂದು ಡಾ. ಪ್ರತೀತ್ ಸಮ್ದಾನಿ ಪಿಟಿಐಗೆ ತಿಳಿಸಿದ್ದಾರೆ.

ಧರ್ಮೇಂದ್ರ ಅವರ ನಿವಾಸಕ್ಕೆ ಆಂಬ್ಯುಲೆನ್ಸ್ ಬಂದು ಹೋಗುವುದನ್ನು ತೋರಿಸುವ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕಾಣಿಸಿಕೊಂಡ ನಂತರ ಈ ಅಪ್‌ಡೇಟ್‌ ಬಂದಿದೆ. ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆ ಸೇರಿರುವ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ನಿಧನರಾಗಿದ್ದಾರೆ ಎಂಬ ವದಂತಿ ಸುದ್ದಿ ವೈರಲ್‌ ಆಗಿತ್ತು. ಇದರ ಬೆನ್ನಲ್ಲೇ ಧರ್ಮೇಂದ್ರ ಪುತ್ರಿ ಇಶಾ ಡಿಯೋಲ್ ಹಾಗೂ ಅವರ ಧರ್ಮಪತ್ನಿ ಹೇಮಾ ಮಾಲಿನಿ ಸಾಮಾಜಿಕ ಮಾಧ್ಯಮಗಳ ಮೂಲಕ ಈ ಬಗ್ಗೆ ಸ್ಪಷ್ಟನೆ ನೀಡಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದರು.

error: Content is protected !!