ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ನಿರ್ದೇಶಕ, ನಟ ಟಪೋರಿ ಸತ್ಯ ನಿಧನರಾಗಿದ್ದಾರೆ. ಶ್ವಾಸಕೋಶದ ಸಮಸ್ಯೆಯಿಂದ ಸತ್ಯ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಪತ್ನಿ ಹಾಗೂ ಮೂವರು ಹೆಣ್ಣುಮಕ್ಕಳಿರುವ ಕುಟುಂಬಕ್ಕೆ ಸತ್ಯ ಅವರೇ ಆಧಾರವಾಗಿದ್ದರು. ಮೂವತ್ತಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸತ್ಯ ಬಣ್ಣ ಹಚ್ಚಿದ್ದು, ಮೇಳ ಸಿನಿಮಾ ಡೈರೆಕ್ಷನ್ ಮಾಡಿದ್ದಾರೆ.
ಬನಶಂಕರಿ ಮೂರನೇ ಹಂತದಲ್ಲಿರುವ ನಿವಾಸದಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸತ್ಯ ನಿಧನಕ್ಕೆ ಸಿನಿ ಗಣ್ಯರು ಸಂತಾಪ ಸೂಚಿಸಿದ್ದಾರೆ.