ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದೊಡ್ಡಣ್ಣ ಅವರ ಹೃದಯಬಡಿತದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ನಿನ್ನೆ ರಾತ್ರಿಯೇ ದಾಖಲಿಸಲಾಗಿದೆ. ದೊಡ್ಡಣ್ಣ ಅವರಿಗೆ ಪೇಸ್ಮೇಕರ್ ಅಳವಡಿಸಲಾಗಿದ್ದು, ಮೂರು ದಿನಗಳ ಚಿಕಿತ್ಸೆ ಅವಶ್ಯ ಇದೆ. ಮೂರು ದಿನದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.