ಶರಣಬಸವೇಶ್ವರರ ಸಂಸ್ಥಾನಕ್ಕೆ ನಟ ಡಾಲಿ ಧನಂಜಯ ಭೇಟಿ

ಹೊಸದಿಗಂತ ವರದಿ ಕಲಬುರಗಿ: 

ಕನ್ನಡ ಚಲನಚಿತ್ರರಂಗದ ನಟ, ನಿರ್ಮಾಪಕ ಡಾಲಿ ಧನಂಜಯ ಕಲಬುರಗಿಯ ಐತಿಹಾಸಿಕ ಶ್ರೀ ಶರಣಬಸವೇಶ್ವರ ಸಂಸ್ಥಾನಕ್ಕೆ ತೆರಳಿ, ಆರಾಧ್ಯ ದೈವ ಶ್ರೀ ಶರಣಬಸವೇಶ್ವರರ ದರ್ಶನ ಪಡೆದು ಕೊಂಡರು.

ತದನಂತರ ದಾಸೋಹದ ಮಹಾ ಮನೆಗೆ ಭೇಟಿ ನೀಡಿ ಮಹಾದಾಸೋಹಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಹಾಗೂ 9ನೇ ಪೀಠಾಧಿಪತಿ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!