ನಟ ಡಾ.ಪುನೀತ್ ರಾಜ್ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆಗೊಳಿಸಿದ ಸಿಎಂ ಬೊಮ್ಮಾಯಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬೆಂಗಳೂರಿನ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಪಂತರಪಾಳ್ಯದಲ್ಲಿ ಇಂದು ಬಿಬಿಎಂಪಿ ವತಿಯಿಂದ ನಿರ್ಮಿಸಿರುವ ‘ಡಾ. ಪುನೀತ್ ರಾಜ್ ಕುಮಾರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ ಹಾಗೂ ಅಭಿವೃದ್ಧಿಪಡಿಸಲಾಗಿರುವ ‘ನಾಯಂಡಹಳ್ಳಿ ಕೆರೆ’ಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು.

ಆರೋಗ್ಯ ಸಚಿವರಾದ ಕೆ.ಸುಧಾಕರ್, ಚಲನಚಿತ್ರ ನಟ,ನಿರ್ಮಾಪಕ ಡಾ.ರಾಘವೇಂದ್ರ ರಾಜ್ ಕುಮಾರ್, ಚಲನಚಿತ್ರ ನಿರ್ಮಾಪಕರಾದ ಶ್ರೀಮತಿ ಆಶ್ವಿನಿ ಪುನೀತ್ ರಾಜ್ ಕುಮಾರ್ ಮತ್ತು ವಿಧಾನಪರಿಷತ್ ಸದಸ್ಯರಾದ ಅ.ದೇವೇಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಆರ್.ರಮೇಶ್ ರವರು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಟಿ.ಎ.ನಾರಾಯಣಗೌಡರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಆಸ್ಪತ್ರೆ ಮತ್ತು ನಾಯಂಡಹಳ್ಳಿ ಕೆರೆಯನ್ನು ಮಾನ್ಯ ಮುಖ್ಯಮಂತ್ರಿಗಳು ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯರು, ಅಧಿಕಾರಿಗಳು, ಆಸ್ಪತ್ರೆ ನಿರ್ಮಾಣ ಸಂಸ್ಥೆಯಾದ ಸ್ವಯಂ ಪ್ರಭ ಕನ್ಸ್ತ್ರಾಕ್ಷನ್ ಕಂಪನಿ ಯವರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!