ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಮತ್ತು ಶಿವಸೇನೆ ನಾಯಕ ಗೋವಿಂದ ಅವರು ಬುಲೆಟ್ ಗಾಯದ ನಂತರ ಮುಂಬೈನ ಕ್ರಿಟಿಕೇರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಿಂದ ನಿರ್ಗಮಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಮ್ಮ ಹಿತೈಷಿಗಳ ಪ್ರಾರ್ಥನೆಗೆ ಧನ್ಯವಾದ ಅರ್ಪಿಸಿದರು.
ಪ್ರತಿಯೊಬ್ಬರಿಗೂ ಅವರ ಪ್ರಾರ್ಥನೆಗಾಗಿ ನಾನು ಧನ್ಯವಾದ ಹೇಳುತ್ತೇನೆ… ನಾನು ಸಿಎಂ ಶಿಂಧೆ, ಪೊಲೀಸರು ಮತ್ತು ಪತ್ರಿಕಾ ಮಾಧ್ಯಮಗಳಿಗೆ ಧನ್ಯವಾದಗಳು. ನನಗಾಗಿ ತುಂಬಾ ಪ್ರಾರ್ಥಿಸಿದ್ದಕ್ಕಾಗಿ ನನ್ನ ಅಭಿಮಾನಿಗಳಿಗೆ ವಿಶೇಷವಾಗಿ ಧನ್ಯವಾದಗಳು. ಅವರ ಪ್ರೀತಿಗಾಗಿ ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.