ಬೆಂಗಳೂರಿನಲ್ಲಿ ಮಳೆಯೋ ಮಳೆ: ಮುಳುಗಿತು ನಟ ಜಗ್ಗೇಶ್​​ ದುಬಾರಿ ಕಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ವರುಣನ ಆರ್ಭಟ ಜೋರಾಗಿ ಮುಂದುವರೆದಿದೆ. ಮಳೆಯಿಂದಾಗಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್‌ ಅವರ ದುಬಾರಿ ಕಾರು ಮುಳುಗಡೆಯಾಗಿದೆ.

ಬೆಂಗಳೂರಿನಲ್ಲಿ ಭಾನುವಾರ ಸಂಜೆಯಿಂದಲೇ ಮಳೆ ಜೋರಾಗಿ ಸುರಿಯುತ್ತಿದೆ. ಕೆ.ಆರ್.ಸರ್ಕಲ್‌, ಮಹಾಲಕ್ಷ್ಮೀ ಲೇಔಟ್‌ ಸೇರಿದಂತೆ ಹಲವು ಪ್ರದೇಶದಲ್ಲಿ ಮಳೆಯ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿದೆ.

ಇತ್ತ ನಟ, ರಾಜ್ಯಸಭಾ ಸದಸ್ಯರೂ ಆಗಿರುವ ಜಗ್ಗೇಶ್‌ ಅವರ ದುಬಾರಿ ಕಾರೊಂದು ಮಳೆಯ ನೀರಿನಲ್ಲಿ ಮುಳುಗಿ ಹೋಗಿದೆ. ಈ ಬಗ್ಗೆ ಸ್ವತಃ ಜಗ್ಗೇಶ್‌ ಅವರೇ ಟ್ವೀಟ್‌ ಮಾಡಿದ್ದಾರೆ.

“ನನ್ನ ಮನೆಯ ರಿಪೇರಿ ಕಾರ್ಯ ಪ್ರಯುಕ್ತ ನನ್ನ ರಸ್ತೆಯ ಸ್ನೇಹಿತ ಮುರಳಿ ಮನೆಯ ಸೆಲ್ಲಾರ್ ನಲ್ಲಿ ನಿಲ್ಲಿಸಿದ್ದ ನನ್ನ bmw5 ಕಾರು ಅಕಾಲಿಕ ಮಳೆ ನೀರಿನಲ್ಲಿ ಮುಳುಗಡೆ ಆಯಿತು. 5hp motor ಮೋಟರ್ ಬಳಸಿ ನೀರು ಹೊರಹಾಕಿಸಲಾಯಿತು. ಇಂಥ ಅಲ್ಲಿಕಲ್ಲಿನ ಮಳೆ ಈ ತಿಂಗಳಲ್ಲಿ ಬಂದದ್ದು ಆಶ್ಚರ್ಯ” ಎಂದು ಬರೆದುಕೊಂಡಿದ್ದಾರೆ.

ಟ್ವಿಟರ್‌ ನಲ್ಲಿ ಈ ಕುರಿತಾಗಿ ಫೋಟೋ ಹಾಗೂ ವಿಡಿಯೋವನ್ನು ಕೂಡ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!