ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು.ಎಂದು ನಟ ಕಮಲ್ ಹಾಸನ್ ಹೇಳಿ ಕನ್ನಡಿಗರನ್ನು ಕೆಣಕಿಸಿದ್ದಾರೆ.
ಕೋಟ್ಯಾಂತರ ಕರುನಾಡಿಗರ ಜೀವನಾಡಿಯಾಗಿರುವ ನಮ್ಮ ಕನ್ನಡ ಭಾಷೆಗೆ ನಟ ಕಮಲ್ ಹಾಸನ್ ಅವಮಾನಿಸಿದ್ದು ಸ್ವಾಭಿಮಾನಿ ಕನ್ನಡಿಗರು ನಿಜಕ್ಕೂ ಕೆರಳುವಂತೆ ಮಾಡಿದೆ.
ಕಮಲ್ ಹಾಸನ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ಶುರುವಾಗಿವೆ. ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಕನ್ನಡ ಪರ ಸಂಘಟನೆಗಳು ಕಮಲ್ ಹಾಸನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸ್ತಿದೆ. ನವರಸನಾಯಕ ನಟ ಜಗ್ಗೇಶ್ ಅವರು ಕಮಲ್ ಹಾಸನ್ ಹೇಳಿಕೆಯನ್ನ ಖಂಡಿಸಿದ್ದಾರೆ.
ಕಲೆಗೆ ಜಾತಿ ಇಲ್ಲ. ಎಲ್ಲಾ ಭಾಷೆಯ ಕಲಾವಿದರು ಶಾರದಾಸುತರು ಒಪ್ಪುತ್ತೇವೆ. ಆ ನಿಟ್ಟಿನಲ್ಲಿ ಕಮಲ್ ಹಾಸನ್ ಅವರ ಮೆಚ್ಚಿದ್ದೇವೆ. ಅಂದ ಮಾತ್ರಕ್ಕೆ ಕನ್ನಡ ತಮಿಳಿಂದ ಹುಟ್ಟಿದೆ ಎಂದ ಅವರ ಮಾತು ಒಪ್ಪೋದಿಲ್ಲ. ಕನ್ನಡಕ್ಕೆ 2.5 ಸಾವಿರ ವರ್ಷದ ಇತಿಹಾಸವಿದೆ. ಅಷ್ಟೇ ಏಕೆ ಹನುಮ ದೇವರು ಕನ್ನಡ ಕಲಿಪುಂಗವ ಅವನ ಕಾಲ ರಾಮಾಯಣ ಇಷ್ಟು ಅರ್ಥವಾದರೆ ಸಾಕಲ್ಲವೆ ಸಾರ್ ಎಂದು ಟ್ವೀಟ್ ಮಾಡಿ ಟಾಂಗ್ ಕೊಟ್ಟಿದ್ದಾರೆ.