ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾರನ್ನೂ ಕೊಲ್ಲುವ ಹಕ್ಕು ಯಾರಿಗೂ ಇಲ್ಲ. ಕರ್ಮ ಜೀವನದ ಹಿಂದೆ ಹಿಂಬಾಲಿಸುತ್ತದೆ. ಅವನ ಪಾಪ ಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ, ಕರ್ಮಕ್ಕೆ ತತ್ಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿರುವ ಟ್ವೀಟ್ ಇದಾಗಿದೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.
ಸರ್ವಆತ್ಮಾನೇನಬ್ರಹ್ಮ
ಸರ್ವ ಜೀವಿಯಲ್ಲಿ ದೇವರಿದ್ದಾನೆ
ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ!
ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ
ಅವನ ಪಾಪಕರ್ಮ ಅವನ ಸುಡುತ್ತದೆ!
ಕಲಿಯುಗದಲ್ಲಿ ದೇವರು ಕಲ್ಲಲ್ಲಾ
ಎಲ್ಲಾ ಕರ್ಮಕ್ಕು ತತಕ್ಷಣ ಪಲಿತಾಂಶ
ಉಂಟು!
ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ!
ಮದಕ್ಕೆ ಕಾರುಣ್ಯದ ಅರಿವಿಲ್ಲಾ!
👨👩👧😭 pic.twitter.com/UrzswPwE6i— ನವರಸನಾಯಕ ಜಗ್ಗೇಶ್(modi ka parivar) (@Jaggesh2) June 11, 2024