Saturday, August 13, 2022

Latest Posts

ನಟ ಜ್ಯೂನಿಯರ್​ ಎನ್​ಟಿಆರ್​ಗೆ ಕೊರೋನಾ ಸೋಂಕು ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ನಟ ಜ್ಯೂನಿಯರ್​ ಎನ್​ಟಿಆರ್​ಗೆ ಕೊರೋನಾ ಸೋಂಕು ದೃಢವಾಗಿದೆ. ಈ ಬಗ್ಗೆ ಸ್ವತಃ ನಟ ಜ್ಯೂ. ಎನ್​ಟಿಆರ್​ ಸೋಶಿಯಲ್​ ಮೀಡಿಯಾ ವೇದಿಕೆಯ ಮೂಲಕ ಮಾಹಿತಿ ನೀಡಿದ್ದಾರೆ.
ನಾನು ಸೋಂಕಿಗೆ ಒಳಗಾಗಿದ್ದೇನೆ. ಯಾರೂ ತಲೆಕೆಡಿಸಿಕೊಳ್ಳಬೇಡಿ. ನಾನು ಚೆನ್ನಾಗಿಯೇ ಇದ್ದೇನೆ. ನಾನು ಹಾಗೂ ನನ್ನ ಕುಟುಂಬಸ್ಥರು ಸದ್ಯ ಐಸೋಲೇಷನ್​ನಲ್ಲಿ ಇದ್ದೇವೆ. ವೈದ್ಯರ ಮಾರ್ಗದರ್ಶನದಲ್ಲಿ ನಾವು ಕೊರೋನಾ ಮಾರ್ಗಸೂಚಿಗಳನ್ನ ಪಾಲನೆ ಮಾಡುತ್ತಿದ್ದೇವೆ. ನನ್ನ ಜೊತೆ ಸಂಪರ್ಕಕ್ಕೆ ಬಂದವರು ದಯಮಾಡಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡುತ್ತಿದ್ದೇನೆ. ಎಲ್ಲರೂ ಸುರಕ್ಷಿತವಾಗಿರಿ ಎಂದು ಟ್ವೀಟಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss