ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಕುರಿತು ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಕಾರಣವಾದ ನಟ ಕಮಲ್ ಹಾಸನ್‌ಗೆ ಅಭಿನಯದ ಸಿನಿಮಾ ಜೂನ್ 5ರಂದು ರಿಲೀಸ್‌ಗೆ ಸಜ್ಜಾಗಿದ್ದು, ಆದ್ರೆ ಸಿನಿಮಾ ರಿಲೀಸ್ ಗೆ ಬ್ಯಾನ್ ಬಿಸಿ ತಟ್ಟಿದೆ. ಈ ನಡುವೆ ಚಿತ್ರಕ್ಕೆ ಅಡ್ಡಿಪಡಿದಂತೆ ನಟ ಕಮಲ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ʻಥಗ್ ಲೈಫ್ʼ ಚಿತ್ರ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ತಮ್ಮ ಒಡೆತನದ ರಾಜಕಮಲ್ ಫಿಲ್ಮ್ ಇಂಟರ್ನ್ಯಾಷನಲ್ ಸಂಸ್ಥೆಯ ಸಿಇಒ ಮೂಲಕ ಕಮಲ್ ಹಾಸನ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಚಲನಚಿತ್ರ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿ ಸಲ್ಲಿಕೆಯಾಗಿದ್ದು, ಮೇಲ್ವಿಚಾರಣೆ ಬಾಕಿಯಿದೆ. ಆದ್ರೆ ಈ ಬಗ್ಗೆ ಕಮಲ್ ಹಾಸನ್ ಎಲ್ಲಿಯೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ.
ದುಬೈನಲ್ಲಿರುವ ಕಮಲ್ ಹಾಸನ್ ಮಂಗಳವಾರ (ಜೂ.3) ಚೆನ್ನೈಗೆ ಬರಲಿದ್ದಾರೆ. ಆದರೆ, ಕ್ಷಮೆ ಕೇಳದ ಹೊರತು ಥಗ್ ಲೈಫ್ ಸಿನಿಮಾ ರಿಲೀಸ್‌ಗೆ ಅವಕಾಶ ಕೊಡೋದೇ ಇಲ್ಲ ಅಂತ ಫಿಲ್ಮ್ ಚೇಂಬರ್ ಅಧ್ಯಕ್ಷ ನರಸಿಂಹಲು ಸ್ಪಷ್ಟವಾಗಿ ಹೇಳಿದ್ದಾರೆ. ಇ