‘ಪುಣ್ಯಕೋಟಿ ದತ್ತು ಯೋಜನೆ’ಯ ರಾಯಭಾರಿಯಾಗಿ ನಟ ಕಿಚ್ಚ ಸುದೀಪ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರ್ನಾಟಕ ಸರಕಾರವು ‘ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ’ಯನ್ನಾಗಿ ನಟ ಕಿಚ್ಚ ಸುದೀಪ್ ಅವರನ್ನು ನೇಮಕ ಮಾಡಿದೆ.

ಇಂದು ಬೆಂಗಳೂರಿನ ಸುದೀಪ್ ಅವರ ನಿವಾಸದಲ್ಲಿ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರವನ್ನು ಇಲಾಖೆ ಸಚಿವ ಪ್ರಭು ಚೌಹಾಣ್ ಪತ್ರ ನೀಡಿ ಸನ್ಮಾನಿಸಿದರು.

ಬಳಿಕ ಮಾತನಾಡಿದ ಸುದೀಪ್, 31 ಗೋವುಗಳನ್ನು ದತ್ತು ಪಡೆವುದಾಗಿತಿಳಿಸಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಿಂದ ಗೋವುಗಳನ್ನು ದತ್ತು ಪಡೆಯಲು‌ ನಿರ್ಧಾರ ಮಾಡಿರುವುದಾಗಿ ತಿಳಿಸಿದ್ದಾರೆ.

ಸುದೀಪ್ ಅವರು ಸರಕಾರದ ಕಾರ್ಯಕ್ರಮಗಳಿಗೆ ರಾಯಭಾರಿ ಆಗುತ್ತಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಅವರು ಹಲವಾರು ಕಾರ್ಯಕ್ರಮಗಳ ಜೊತೆ ಕೈ ಜೋಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!