ಬಿಜೆಪಿ ಪ್ರಚಾರ ಭರಾಟೆ: ಇಂದು ಕಿಚ್ಚ ಸುದೀಪ್ ಅಖಾಡಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಜೆಪಿ ಪ್ರಚಾರದ ಕಣಕ್ಕೆ ಇಂದು ನಟ ಕಿಚ್ಚ ಸುದೀಪ್‌ ಧುಮುಕಲಿದ್ದಾರೆ. ಮೊಳಕಾಲ್ಮೂರು, ಜಗಳೂರು, ಬಳ್ಳಾರಿ ಮುಂತಾದ ಕಡೆಗಳಲ್ಲಿ ರೋಡ್‌ ಶೋ, ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಬಸವರಾಜ ಬೊಮ್ಮಾಯಿ ಮಾಮ ಪರ ಪ್ರಚಾರ ಮಾಡುವುದಾಗಿ ಹೇಳಿದ್ದ ನಟ ಕಿಚ್ಚ ಸುದೀಪ್, ತನ್ನ ಪ್ರಚಾರವನ್ನು ಇತರ ಬಿಜೆಪಿ ಅಭ್ಯರ್ಥಿಗಳಿಗೂ ವಿಸ್ತರಿಸಿದ್ದಾರೆ. ಇಂದು ರಾಜ್ಯದ ಹಲವೆಡೆ ಬಿಜೆಪಿ ಪರ ಮತಯಾಚನೆ ಮಾಡಲಿದ್ದಾರೆ.

ಇಂದು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನ ಬಿಜೆಪಿ ಅಭ್ಯರ್ಥಿ ತಿಪ್ಪೇಸ್ವಾಮಿ ಪರ ರೋಡ್ ಶೋ ಮಾಡಲಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರದಿಂದ ನೇರವಾಗಿ ಜಗಳೂರು ಕ್ಷೇತ್ರದತ್ತ ಹೆಲಿಕಾಪ್ಟರ್ ನಲ್ಲೇ ಪ್ರಯಾಣ ಮುಂದುವರೆಸುವ ಸುದೀಪ್ 12.30ಕ್ಕೆ ಜಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಅವರ ಪರವಾಗಿ ರೋಡ್ ಶೋ ನಡೆಸಲಿದ್ದಾರೆ. ಜಗಳೂರು ಮಾಯಕೊಂಡ ಬಿಜೆಪಿ ಅಭ್ಯರ್ಥಿ ಎಂ. ಬಸವರಾಜ್ ಪರ ಕಿಚ್ಚ ಪ್ರಚಾರ ಮಾಡಲಿದ್ದಾರೆ. ದಾವಣಗೆರೆ ಉತ್ತರ ಬಿಜೆಪಿ ಅಭ್ಯರ್ಥಿ ಲೋಕಿಕೆರೆ ನಾಗರಾಜು ಮತ್ತು ದಕ್ಷಿಣ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಬಿ. ಅಜಯ್ ಕುಮಾರ್ ಪರ ಒಂದು ಗಂಟೆಗೂ ಅಧಿಕ ಕಾಲ ಅವರು ರೋಡ್ ಶೋ ನಡೆಸಲಿದ್ದಾರೆ.

ಬಳಿಕ ಸಂಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ ಪರ ಸುದೀಪ್ ಪ್ರಚಾರ ಮಾಡಲಿದ್ದಾರೆ. ಇಂದು ಒಟ್ಟು 3 ಜಿಲ್ಲೆಗಳ 6 ವಿಧಾನಸಭಾ ಕ್ಷೇತ್ರಗಳಲ್ಲಿ ಕಿಚ್ಚ ರೋಡ್ ಶೋ ಮೂಲಕ ಕ್ಯಾಂಪೇನ್ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!