Monday, December 22, 2025

ಕುಟುಂಬ ಸಮೇತರಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಟ ಕಿಚ್ಚ ಸುದೀಪ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ಕಿಚ್ಚ ಸುದೀಪ್ ಪತ್ನಿ ಸಮೇತರಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ.

ಸುದೀಪ್ ದಂಪತಿ ಜೊತೆ ಬಿಗ್‌ಬಾಸ್ ಸ್ಪರ್ಧಿ ವಿನಯ್ ಗೌಡ, ಪತ್ನಿ ಅಕ್ಷತಾ ಹಾಗೂ ಪುತ್ರ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ.

ಇತ್ತೀಚೆಗಷ್ಟೆ ಅಗಲಿದ್ದ ತಾಯಿಯ ಹುಟ್ಟುಹಬ್ಬವನ್ನು ಶನಿವಾರ ಗಿಡ ನೆಡುವ ಮೂಲಕ ಸುದೀಪ್ ವಿಶೇಷವಾಗಿ ಆಚರಿಸಿದ್ದರು. ಅಲ್ಲದೇ ಇದೇ ಸೆಪ್ಟೆಂಬರ್ 2 ರಂದು ಸುದೀಪ್ ಕೂಡ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ.

error: Content is protected !!