ಕವನದ ಮೂಲಕ ಶ್ರೀರಾಮನ ಸ್ಮರಣೆ ಮಾಡಿದ ನಟ ಕಿಚ್ಚ ಸುದೀಪ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ ನಟ ಕಿಚ್ಚ ಸುದೀಪ್ ಅವರು ಶ್ರೀರಾಮನ ಸ್ಮರಣೆ ಮಾಡಿದ್ದಾರೆ.

ರಾಮನಿಗೆ ದೀಪ ಬೆಳಗುವ ವಿಡಿಯೋ ಒಂದನ್ನು ಶೇರ್ ಮಾಡಿದ್ದರು. ಇದೀಗ ಇನ್ನೊಂದು ಪೋಸ್ಟ್ ಮಾಡಿದ್ದಾರೆ.

ಕಿಚ್ಚ ಸುದೀಪ ಕವನ ಹೀಗಿದೆ: ರಾಮ ಜಯ ರಾಮ ಆದಿ ಗುರು ಮಹರ್ಷಿ ಶ್ರೀ ವಾಲ್ಮೀಕಿ ಮೊದಲು ನಿಮ್ಮ ಕಥೆ ಹೇಳಿದರು. ವಾಲ್ಮೀಕಿಗಳು ರೂಪಿಸಿದ ಶ್ರೀ ರಾಮ ನೀನು ನಮ್ಮ ಎದೆಯಲ್ಲಿ ಶಾಶ್ವತವಾಗಿ ನಿಂತೆ ವರ್ಷಗಳ ಕಾಯುವಿಕೆ ನಂತರ ಇಂದು ವಿರಾಜಮಾನನಾದೆ ಗುಡಿಯೊಳಗೆ, ನಿನ್ನ ಕಣ್ಣುಂಬಿಕೊಳ್ಳಲು ಎರಡೇ ಕಣ್ಣನ್ನೇಕೆ ಕೊಟ್ಟೆ? ನಿನ್ನ ಕೀರ್ತನೆಗೆ ಎರಡೇ ಕಿವಿಗಳು, ನಮ್ಮದು ಎಂತಹ ಪುಣ್ಯ ಕರುನಾಡಿನಿಂದ ವಿಗ್ರಹವಾಗಿ ರೂಪುಗೊಂಡೆ.

ಕರ್ನಾಟಕದ ಮಣ್ಣ ಗರ್ಭದಿಂದ ಎದ್ದು ಬಂದೆ ನಿನ್ನ ಆಲಯ ಕಟ್ಟಲು ಶ್ರೀ ವಿಶ್ವ ಪ್ರಸನ್ನ ತೀರ್ಥ ಗುರುಗಳಿಗೆ ಅದೃಷ್ಟ ಕೊಟ್ಟೆ, ಅರುಣ್ ಯೋಗಿರಾಜ್ ಅವರಿಗೆ ನಿನ್ನ ಕೆತ್ತಲು ಕಲಾಶಿರ್ವಾದವಾದೆ. ನಿನ್ನ ಪರಮ ಭಕ್ತ ಕನ್ನಡದ ಮಣ್ಣಿನ ವೀರ ಹನುಮಾನ ಇದು ಕರ್ನಾಟಕಕ್ಕೆ ನಿಜದ ಸಮ್ಮಾನ, ಜೈ ಶ್ರೀರಾಮ್’ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಕಿಚ್ಚ ಸುದೀಪ್ ಬಾಲ ರಾಮನ ಮುಂದೆ ಹೂಗಳನ್ನ ಇಟ್ಟು ಪೂಜೆ ಸಲ್ಲಿಸಿದ್ದಾರೆ. ದೀಪ ಬೆಳಗಿಸಿ ತಮ್ಮ ರಾಮ ಭಕ್ತಿಯನ್ನು ವ್ಯಕ್ತಪಡಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!