ನಟ ಕಿರಣ್‌ ರಾಜ್‌ ಕಾರು ಭೀಕರ ಅಪಘಾತ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕನ್ನಡದ ಕಿರುತೆರೆ ನಟ ಕಿರಣ್‌ ರಾಜ್‌ ಕಾರು ಅಪಘಾತಕ್ಕೀಡಾಗಿದೆ. ಕನ್ನಡತಿ ಸೀರಿಯಲ್‌ ಮೂಲಕ ಜನರ ಮನೆಮಾತಾಗಿದ್ದ ಕಿರಣ್‌ ಸಿನಿಮಾದಲ್ಲಿ ಬ್ಯುಸಿಯಾಗಿದ್ದರು. ಇನ್ನೇನು ಸಿನಿಮಾ ರಿಲೀಸ್‌ಗೆ ಕೆಲವೇ ದಿನಗಳಿವೆ ಎನ್ನುವಾಗ ಭೀಕರ ಅಪಘಾತವಾಗಿದೆ.

ಕಿರಣ್ ರಾಜ್​ ಎದೆ ಭಾಗಕ್ಕೆ ಪೆಟ್ಟಾಗಿದ್ದು, ಕಾರಿಗೆ ಹಾನಿ ಆಗಿದೆ. ಕಿರಣ್ ರಾಜ್​ಗೆ ಕೆಂಗೇರಿ ಬಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಎಕ್ಸಿಕ್ಯೂಟಿವ್​ ಪ್ರೊಡ್ಯೂಸರ್ ಪಾರಾಗಿದ್ದಾರೆ. ಅವರ ನಟನೆಯ ‘ರಾನಿ’ ಸಿನಿಮಾ ಈ ವಾರ ರಿಲೀಸ್ ಆಗಬೇಕಿತ್ತು. ಅದಕ್ಕೂ ಮೊದಲು ಈ ರೀತಿ ಆಗಿದೆ.

ಕಿರಣ್ ರಾಜ್ ಅವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಅವರು ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಕಿರಣ್ ರಾಜ್ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅವರು ಓಡಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರಿನ ಬಲಭಾಗಕ್ಕೆ ಹಾನಿ ಆಗಿದೆ. ಸದ್ಯ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!