ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ನಟ ಕಿಶೋರ್ ಅವರ ಟ್ವಿಟರ್ ಅಕೌಂಟ್ ಸಸ್ಪೆಂಡ್ ಆಗಿದೆ ಎಂಬ ಉಹಾಪೋಹಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಇದೀಗ ಈ ಕುರಿತು ಸ್ವತಃ ಕಿಶೋರ್ ಅವರು ಸ್ಪಷ್ಟನೆ ನೀಡಿದ್ದಾರೆ.
ತಮ್ಮ ಟ್ವಿಟರ್ ಅಕೌಂಟ್ ಸಸ್ಪೆಂಡ್ ಆಗಲು ಕಾರಣ ಏನು ಎಂಬುದನ್ನು ಅವರು ತಿಳಿಸಿದ್ದಾರೆ.
ಈ ಕುರಿತು ಅವರು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಬರೆದುಕೊಂಡಿದ್ದಾರೆ. ಕಿಶೋರ್ ಅವರ ಟ್ವಿಟರ್ ಖಾತೆ ಮೇಲೆ ಹ್ಯಾಕರ್ಗಳ ಕಣ್ಣು ಬಿದ್ದಿದೆ. ಅಕೌಂಟ್ ಸಸ್ಪೆಂಡ್ ಆಗಲು ಇದು ಮುಖ್ಯ ಕಾರಣ ಎಂದು ಅವರು ತಿಳಿಸಿದ್ದಾರೆ.
ಅನವಶ್ಯಕ ಊಹಾಪೋಹಗಳನ್ನು ತಡೆಯಲಿಕ್ಕಾಗಿಯಷ್ಟೆ. ನನ್ನ ಟ್ವಿಟರ್ ಅಕೌಂಟ್ ಸಸ್ಪೆಂಡ್ ಆದದ್ದು ನನ್ನ ಯಾವ ಪೋಸ್ಟಿನಿಂದಲೂ ಅಲ್ಲ. ಡಿಸೆಂಬರ್ 20ನೇ ತಾರೀಕು 2022ರಂದು ಹ್ಯಾಕ್ ಮಾಡಲಾಗಿದ್ದರಿಂದ ಎಂದು ತಿಳಿದುಬಂದಿದೆ. ತಕ್ಕ ಕ್ರಮ ಕೈಗೊಳ್ಳುವ ಭರವಸೆ ಟ್ವಿಟರ್ ಕೂಡ ಕೊಟ್ಟಿದೆ. ಎಲ್ಲರ ಕಾಳಜಿಗೆ ಧನ್ಯವಾದಗಳು ಎಂದು ಕಿಶೋರ್ ಪೋಸ್ಟ್ ಮಾಡಿದ್ದಾರೆ.