ನಟಿ ಖುಷ್ಬೂ ಆಸ್ಪತ್ರೆಗೆ ದಾಖಲು: ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳ ಟ್ವೀಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸ್ಟಾರ್ ಹೀರೋಯಿನ್ ಖುಷ್ಬೂ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕನ್ನಡ, ತಮಿಳು, ತೆಲುಗು ಅಲ್ಲದೆ ಹಲವು ಭಾಷೆಗಳಲ್ಲಿ ನಟಿಸಿರುವ ಖುಷ್ಬೂ, ಸದ್ಯ ಪೋಷಕ ಪಾತ್ರಗಳಲ್ಲಿ ನಟಿಸಿ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ.

ಆಕೆ ಸಿನಿಮಾ ನಟಿ ಮಾತ್ರವಲ್ಲದೆ ರಾಜಕಾರಣಿಯೂ ಹೌದು. ಪ್ರಸ್ತುತ ಅವರು ತಮಿಳುನಾಡು ಬಿಜೆಪಿ ಮಹಿಳಾ ನಾಯಕಿಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ ಕೆಲ ದಿನಗಳಿಂದ ಬೆನ್ನುನೋವಿನ ಸಮಸ್ಯೆಯಿಂದ ಬಳಲುತ್ತಿರುವ ಅವರು ಕಳೆದ ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.

ಈ ಬಗ್ಗೆ ನಟಿ ಕುಷ್ಬೂ ಟ್ವಿಟ್ಟರ್ ನಲ್ಲಿ ಪೋಸ್ಟ್‌ ಮಾಡಿದ್ದು, ಕೆಲ ದಿನಗಳಲ್ಲಿ ನಾನು ಆಸ್ಪತ್ರೆಯಿಂದ ವಾಪಸ್‌ ಬಂದು ಕರ್ತವ್ಯಕ್ಕೆ ಸೇರಲಿದ್ದೇನೆ ಎಂದು ಬರೆದಿದ್ದು, ಜೊತೆಗೆ ಆಸ್ಪತ್ರೆಯಲ್ಲಿ ತಮ್ಮ ಸೆಲ್ಫಿಯೊಂದನ್ನು ಟ್ವೀಟ್ ಮಾಡಿದ್ದಾರೆ. ಸುದ್ದಿ ತಿಳಿದ ಅಭಿಮಾನಿಗಳು ಶೀಘ್ರ ಗುಣಮುಖರಾಗಿ ಬನ್ನಿ ಎಂದು ಟ್ವೀಟ್ ಮೂಲಕ ಹರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!