ನಟ ಮಹೇಶ್‌ ಬಾಬುಗೆ ಕೋವಿಡ್‌ ದೃಢ:‌ ಮನೆಯಲ್ಲೇ ಐಸೋಲೇಟ್ ಆದ ನಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಟಾಲಿವುಡ್‌ ಸೂಪರ್‌ ಸ್ಟಾರ್‌ ಮಹೇಶ್‌ ಬಾಬುಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡರೂ ಕೂಡ ಸೌಮ್ಯ ರೋಗ ಲಕ್ಷಣಗಳಿದ್ದು, ಕೋವಿಡ್‌ ಪಾಸಿಟಿವ್‌ ವರದಿ ಬಂದಿದೆ. ಈ ನಿಟ್ಟಿನಲ್ಲಿ ಹೋಂ ಐಸೊಲೇಷನ್‌ ನಲ್ಲಿದ್ದೇನೆ ಎಂದು ಟ್ವಿಟರ್‌ ನಲ್ಲಿ ತಿಳಿಸಿದ್ದಾರೆ.
ತಮ್ಮ ಸಂಪರ್ಕಕ್ಕೆ ಬಂದವರನ್ನು ಕೋವಿಡ್‌ ಪರೀಕ್ಷೆ ನಡೆಸಿಕೊಳ್ಳುವಂತೆ ಸೂಚಿಸಿದ್ದಾರೆ. ಲಸಿಕೆ ಪಡೆಯದವರು ಲಸಿಕೆ ಹಾಕಿಸಿಕೊಳ್ಳಿ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!