ನಟ ಮಹೇಶ್ ಬಾಬು ತಂದೆಯ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಟಾಲಿವುಡ್ ನಟ ಮಹೇಶ್ ಬಾಬು ಅವರ ತಂದೆ ಕೃಷ್ಣ ಅವರ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ.

ನಿನ್ನೆ ಅನಾರೋಗ್ಯದ ಕಾರಣದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರನ್ನು ಐಸಿಯುಗೆ ಸ್ಥಳಾಂತರಿಸಿ, ಅಲ್ಲಿಯೇ ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ.

ಆಸ್ಪತ್ರೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಹಿತಿ ನೀಡಿದ್ದು, ಕ್ಷಣ ಕ್ಷಣಕ್ಕೂ ಕೃಷ್ಣ ಅವರ ಆರೋಗ್ಯ ಕ್ಷೀಣಿಸುತ್ತಿದೆ. ನುರಿತ ವೈದ್ಯರ ತಂಡ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಆರೋಗ್ಯ ಸ್ಥಿತಿ ತೀರಾ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಸಹಜವಾಗಿಯೇ ಕುಟುಂಬದ ಸದಸ್ಯರಲ್ಲಿ ಆತಂಕ ಮನೆ ಮಾಡಿದೆ. ಇತ್ತೀಚೆಗಷ್ಟೇ ಕೃಷ್ಣ ಅವರು ಹೆಂಡತಿಯನ್ನು ಕಳೆದುಕೊಂಡಿದ್ದರು. ಆ ನೋವಲ್ಲೇ ಅವರು ದಿನಗಳನ್ನು ಕಳೆಯುತ್ತಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!