ನಟ ಮಾಸ್ಟರ್ ಆನಂದ್‌ಗೆ ವಂಚನೆ: ದೂರು ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಟ ಮಾಸ್ಟರ್ ಆನಂದ್‌ಗೆ ವಂಚನೆಯಾಗಿದ್ದು, ಸ್ವತಃ ಅವರೇ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಿವೇಶನ ಕೊಡಿಸುವುದಾಗಿ 18.50 ಲಕ್ಷ ರೂ. ಹಣವನ್ನು ಮಾಸ್ಟರ್ ಆನಂದ್ ರಿಂದ ಪಡೆದಿದ್ದ ಖಾಸಗಿ ಸಂಸ್ಥೆಯೊಂದು ಇನ್ನೂ ನಿವೇಶನವನ್ನೂ ನೀಡದೇ, ಮುಂಗಡ ಹಣವನ್ನೂ ವಾಪಸ್ ಕೊಡದೇ ವಂಚನೆ ಮಾಡಿದ್ದಾರೆ ಎಂದು ಕಂಪನಿ ವಿರುದ್ದ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ.

ಬೆಂಗಳೂರಿನ ಕೊಮ್ಮಘಟ್ಟದ ರಾಮಸಂದ್ರ ಗ್ರಾಮದಲ್ಲಿ ನಿವೇಶನ ನೀಡುವುದಾಗಿ ಕಂಪೆನಿಯು ಹೇಳಿತ್ತು. ಈ ಸಂದರ್ಭ ಖಾಸಗಿ ಕಂಪನಿಯವರು, ನಿವೇಶನ ಖರೀದಿಸಲು ಸಾಲ ಸೌಲಭ್ಯ ಇರೋದಾಗಿ ಹೇಳಿದ್ದು, ಕಂಪನಿ ಮಾತು ಕೇಳಿಕೊಂಡು ಮಾಸ್ಟರ್ ಆನಂದ್ ಸೈಟ್ ಖರೀದಿಸಿದ್ದರು. 70 ಲಕ್ಷಕ್ಕೆ ಖರೀದಿ ಒಪ್ಪಂದವಾಗಿದ್ದು ಹಂತ ಹಂತವಾಗಿ ಮಾಸ್ಟರ್ ಆನಂದ್, 18.5 ಲಕ್ಷ ರೂ. ಮುಂಗಡ ಹಣವನ್ನು ಕಂಪನಿಗೆ ನೀಡಿದ್ದರು ಎನ್ನಲಾಗಿದೆ.

ಮಾಸ್ಟರ್ ಆನಂದ್ ಹಾಗೂ ಅವರ ಪತ್ನಿ ಯಶಸ್ವಿನಿ ಹೆಸರಲ್ಲಿ ಈ ಕಂಪನಿ ಖರೀದಿ ಖರಾರು ಪತ್ರ ಕೂಡ ಮಾಡಿಕೊಟ್ಟಿತ್ತು ಎನ್ನಲಾಗಿದೆ. ಈ ನಡುವೆ ನಿವೇಶನವನ್ನ ಬೇರೆಯವರಿಗೆ ಕಂಪನಿ ಮಾರಾಟ ಮಾಡಿದೆ. ಈ ಬಗ್ಗೆ ಪ್ರಶ್ನಿಸಿದಾಗ ಯಾವುದೇ ಸ್ಪಂದನೆ ಸಹ ನೀಡದೆ ಮುಂಗಡ ಹಣವನ್ನೂ ಹಿಂದಿರುಗಿಸಿಲ್ಲ ಎನ್ನಲಾಗಿದೆ.

ಈ ವಂಚನೆ ಬಗ್ಗೆ ಚಂದ್ರಲೇಔಟ್ ಠಾಣೆಯಲ್ಲಿ ಮಾಸ್ಟರ್ ಆನಂದ್ ದೂರು ನೀಡಿದ್ದಾರೆ. ಬಿಯುಡಿಎಸ್ (ಬಿಯುಡಿಎಸ್ ಅನಿಯಂತ್ರಿತ ಉಳಿತಾಯ ಯೋಜನೆಗಳ ನಿಷೇಧ ಕಾಯ್ದೆ) ಕಾಯ್ದೆ 2019ರ ಅಡಿ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!