ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಿ: ಕೇಂದ್ರಕ್ಕೆ ನಟ ಮಿಥುನ್ ಚಕ್ರವರ್ತಿ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ನಟ ಹಾಗೂ ಬಿಜೆಪಿ ನಾಯಕ ಮಿಥುನ್‌ ಚಕ್ರವರ್ತಿ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದಿದ್ದು , ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ನಾನು ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿದ್ದೇನೆ, ಈಗಲೂ ಗೃಹಸಚಿವರಿಗೆ ಮನವಿ ಮಾಡುತ್ತಿದ್ದೇನೆ. ಕನಿಷ್ಠ ಪಕ್ಷ ಚುನಾವಣೆ ಸಂದರ್ಭದಲ್ಲಿ 2 ತಿಂಗಳ ಕಾಲ ಮಿಲಿಟರಿಯನ್ನಾದರೂ ನಿಯೋಜಿಸಿ, ಆಗ ನ್ಯಾಯಯುತ ಚುನಾವಣೆ ನಡೆಯುತ್ತದೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡ ವಿಡಿಯೋನಲ್ಲಿ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!