ಹೊಸ ದಿಗಂತ ಆನ್ ಲೈನ್ ಡೆಸ್ಕ್:
ವಿಧಾನಸಭೆ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರು ಪಶ್ಚಿಮ ಬಂಗಾಳದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ. ಈ ವೇಳೆ ನಟ, ಟಿಎಂಸಿ ರಾಜ್ಯ ಸಭಾ ಸದಸ್ಯ ಮಿಥುನ್ ಚಕ್ರವರ್ತಿ ಮೋದಿಯವರೊಂದಿಗೆ ವೇದಿಕೆ ಹಂಚಿಕೊಳ್ಳುವ ಸಾಧ್ಯತೆ ಇದೆ.
ಇಂದು ನಡೆಯುವ ಬೃಹತ್ ಸಮಾವೇಶದಲ್ಲಿ ಮಿಥುನ್ ಚಕ್ರವರ್ತಿ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಅಥವಾ ಪಕ್ಷದ ಪರ ಪ್ರಚಾರ ಕೈಗೊಳ್ಳಬಹುದು ಎನ್ನಲಾಗಿದೆ.
ನಿನ್ನೆ ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ ಕೈಲಾಶ್ ವಿಜಯವರ್ಗೀಯಾ ಅವರು ಮಿಥುನ್ ಚಕ್ರವರ್ತಿ ಮನೆಗೆ ಭೇಟಿ ನೀಡಿದ್ದು, ಬಿಜೆಪಿ ಸೇರ್ಪಡೆ ಸುದ್ದಿಗೆ ಮತ್ತಷ್ಟು ಪುಷ್ಠಿ ಸಿಕ್ಕಿದೆ. ಇಂದು ನಡೆಯಲಿರುವ ಸಮಾವೇಶದಲ್ಲಿ 7 ಲಕ್ಷ ಮಂದಿ ಭಾಗಿಯಾಗುವ ಸಾಧ್ಯತೆ ಇದೆ.