ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಲಿವುಡ್ನ ಸೂಪರ್ಸ್ಟಾರ್ ಮೋಹನ್ಲಾಲ್ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರುಶನ ಪಡೆದಿದ್ದಾರೆ.
ಉಡುಪಿ ಜಿಲ್ಲೆ ಕುಂದಾಪುರದ ಪ್ರಸಿದ್ಧ ಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು, ವಿಶೇಷ ಪೂಜೆ ಸಲ್ಲಿಸಿ, ದೇವಿಯ ಸನ್ನಿಧಿಯಲ್ಲಿ ಕೆಲಕಾಲ ಧ್ಯಾನ ಮಾಡಿದರು.
ದೇವಸ್ಥಾನದ ಪ್ರಾಂಗಣದಲ್ಲಿ ಗಣಪತಿ, ವೀರಭದ್ರ ಗುಡಿಗಳಿಗೆ ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದರು.
ಈ ವೇಳೆ ಭಕ್ತರು ಮೋಹನ್ ಲಾಲ್ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು, ವೀಡಿಯೋ ಮಾಡಲು ನೂರಾರು ಜನ ಮುಗಿಬಿದ್ದರು.