Monday, March 27, 2023

Latest Posts

ನಟ ನಂದಮೂರಿ ತಾರಕರತ್ನ ಆರೋಗ್ಯ ಸ್ಥಿತಿ ಚಿಂತಾಜನಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ ನಂದಮೂರಿ ತಾರಕರತ್ನ ಅವರ ಅರೋಗ್ಯ ತಿ ಚಿಂತಾಜನಕವಾಗಿದ್ದು, ಮತ್ತಷ್ಟು ಹದಗೆಟ್ಟಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಳೆದ 20 ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾರಕರತ್ನ ಅವರಿಗೆ ವಿದೇಶಿ ವೈದ್ಯರು ಚಿಕಿತ್ಸೆ ನೀಡಿದ್ದರು.

ಈ ನಡುವೆಸ್ವಲ್ಪ ಚೇತರಿಸಿಕೊಂಡಂತೆ ಕಂಡರೂ ಮತ್ತೆ ಅದೇ ಪರಿಸ್ಥಿತಿಆಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.

ಟಿಡಿಪಿ ಯುವ ಮುಖಂಡ ನಾರಾ ಲೋಕೇಶ್ ಅವರು ಕೈಗೊಂಡಿರುವ ‘ಯುವಗಳಂ’ ಪಾದಯಾತ್ರೆಯಲ್ಲಿ ನಟ ತಾರಕರತ್ನ ಕೂಡ ಭಾಗವಹಿಸಿದ್ದರು. ಪಾದಯಾತ್ರೆಯ ಅಂಗವಾಗಿ ಲೋಕೇಶ್ ಅವರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ತೀವ್ರ ಹೃದಯಾಘಾತವಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನ ಕುಪ್ಪಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆ ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಸ್ಥಳಾಂತರಿಸಲಾಗಿದ್ದು, ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!