‘ದಿ ಕೇರಳ ಸ್ಟೋರಿ’ಗೆ ನಟ ನಾಸಿರುದ್ದೀನ್ ವಿರೋಧ: ತಕರಾರುಗಳಿದ್ದರೆ ಕೋರ್ಟಿಗೆ ಹೋಗಿ ಎಂದ ಮನೋಜ್ ತಿವಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಹೊಸ ಹೊರುಪು ತಂದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇದರ ನಡುವೆ ವಿರೋಧ ವ್ಯಕ್ತಪಡಿಸಿದ್ದರು. ಈ ರೀತಿ ವಿರೋಧ ಮಾಡಿದವರಲ್ಲಿ ಬಾಲಿವುಡ್ ನಟ ನಾಸಿರುದ್ದೀನ್ ಶಾ ಕೂಡ ಒಬ್ಬರು.

ಇದೀಗ ನಾಸಿರುದ್ದೀನ್ (Naseeruddin Shah) ಮಾತಿಗೆ ನಟ, ರಾಜಕಾರಣಿ ಮನೋಜ್ ತಿವಾರಿ (Manoj Tiwari) ಎದುರೇಟು ಕೊಟ್ಟಿದ್ದಾರೆ. ನಾಸಿರುದ್ದೀನ್ ಅವರಿಗೆ ಸಿನಿಮಾ ಬಗ್ಗೆ ತಕರಾರುಗಳಿದ್ದರೆ ನೇರವಾಗಿ ಅವರು ಕೋರ್ಟಿಗೆ ಹೋಗಬಹುದು ಎಂದಿದ್ದಾರೆ.

‘ದಿ ಕೇರಳ ಸ್ಟೋರಿ’ ಬಗ್ಗೆ ಕಾಮೆಂಟ್ ಮಾಡಿದ್ದ ನಾಸಿರುದ್ದೀನ್ ಈ ಸಿನಿಮಾವನ್ನು ತಾವು ಯಾವತ್ತೂ ನೋಡುವುದಿಲ್ಲ ಎಂದಿದ್ದರು. ಸಿನಿಮಾ ಗೆದ್ದಿದೆ ಎಂದ ಮಾತ್ರಕ್ಕೆ ಅದು ಒಳ್ಳೆಯ ಗೆಲುವಲ್ಲ. ಅದೊಂದು ಕೆಟ್ಟ ಟ್ರೆಂಡಿನ ಗೆಲುವು ಎಂದು ಪ್ರತಿಕ್ರಿಯಿಸಿದ್ದಾರೆ. ದ್ವೇಷವನ್ನು ಹಂಚುತ್ತಿರುವ ಕುರಿತು ಅವರು ಕಳವಳವನ್ನು ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇನ್ನೆಷ್ಟು ದಿನ ಈ ದ್ವೇಷವನ್ನು ಹಂಚುತ್ತೀರಿ ಎಂದು ಪ್ರಶ್ನೆ ಮಾಡಿದ್ದರು.

ಅಬುಧಾಬಿಯಲ್ಲಿ ನಡೆದ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಿದ್ದ ಕಮಲ್ ಹಾಸನ್, ಈ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ‘ನಾನು ದಿ ಕೇರಳ ಸ್ಟೋರಿ ಸಿನಿಮಾವನ್ನು ವಿರೋಧಿಸುತ್ತಲೇ ಬಂದಿದ್ದೇನೆ. ಅದಕ್ಕಾಗಿ ನನ್ನನ್ನೂ ವಿರೋಧಿಸಿದ್ದಾರೆ. ಸಿನಿಮಾದಲ್ಲಿ ಸತ್ಯ ಘಟನೆ ಆಧರಿಸಿದ ಸಿನಿಮಾ ಎಂದು ಹೇಳಿದರೆ ಸಾಲದು. ಅದರಲ್ಲಿ ಸತ್ಯ ಇರಬೇಕು’ ಎಂದು ಪ್ರತಿಕ್ರಿಯಿಸಿದ್ದರು.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!