July 14, 2026
Tuesday, July 14, 2026
spot_img

ನಟ ಪಂಕಜ್‌ ತ್ರಿಪಾಠಿ ಸಹೋದರನ ಮೇಲೆ ಮಾರಣಾಂತಿಕ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಾಲಿವುಡ್‌ನ ಖ್ಯಾತ ನಟ ಪಂಕಜ್‌ ತ್ರಿಪಾಠಿ ಸಹೋದರನ ಮೇಲೆ ಹಾಡಹಗಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಬಿಹಾರದ ಮಾಧೋಪುರದ ಬೆಲ್ಸಂದ್‌ ಗ್ರಾಮದಲ್ಲಿ ಘಟನೆ ನಡೆದಿದ್ದು,ಇಡೀ ಊರಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಬಿಜೇಂದ್ರ ತಿವಾರಿ ನಾಥ್‌ ಮೇಲೆ ದಾಳಿ ನಡೆಸಲು ಹಳೆಯ ವೈಷಮ್ಯ ಕಾರಣ ಎಂದು ಶಂಕಿಸಲಾಗಿದೆ.

ಹಲ್ಲೆಯ ತಕ್ಷಣವೇ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಪ್ರಾಥಮಿಕ ಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದರಿಂದ, ವೈದ್ಯರ ಸೂಚನೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸದ್ಯ ಅವರನ್ನು ಪಾಟ್ನಾದ ದೊಡ್ಡ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪರಿಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಮಾಧೋಪುರ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಈಗಾಗಲೇ ಪ್ರಮುಖ ಆರೋಪಿಯನ್ನು ಗುರುತಿಸಲಾಗಿದ್ದು, ಆತನನ್ನು ಬಂಧಿಸಲು ವಿವಿಧೆಡೆ ಅನ್ವೇಷಣೆ ನಡೆಸಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !