ನಟ, ರಾಜಕಾರಣಿ ಪವನ್ ಕಲ್ಯಾಣ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್

ಜನಸೇನಾ ಪಕ್ಷದ ಮುಖ್ಯಸ್ಥ ಮತ್ತು ದಕ್ಷಿಣ ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಧ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜಕೀಯ ಕಾರ್ಯಕ್ರಮದ ನಿಮಿತ್ತ ಪವನ್ ಕಲ್ಯಾಣ್‌ ಗೋದಾವರಿ ಜಿಲ್ಲೆಗಳಲ್ಲಿ ಎರಡು ದಿನದ ಪ್ರವಾಸ ಕೈಗೊಂಡಿದ್ದು, ಈ ಪ್ರಕ್ರಿಯೆಯಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದು, ವೈರಲ್ ಜ್ವರ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ವೈರಲ್ ಜ್ವರದಿಂದ ಬಳಲುತ್ತಿರುವ ಪವನ್ ಪ್ರಸ್ತುತ ಹೈದರಾಬಾದ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ತಮ್ಮ ಚಿತ್ರಗಳ ಚಿತ್ರೀಕರಣಕ್ಕೆ ವಿರಾಮ ನೀಡಿದ್ದು, ಈ ವಿಷಯವು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ.
ವೈರಲ್ ಜ್ವರದಿಂದ ಪವನ್ ಅವರ ಈ ತಿಂಗಳ 24 ರಂದು ನಡೆಯಬೇಕಿದ್ದ ಜನವಾಣಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ಈ ತಿಂಗಳ 31ರಂದು ಮತ್ತೆ ಕಾರ್ಯಕ್ರಮ ನಡೆಯಲಿದೆ ಎಂದು ಪಕ್ಷದ ಪಿಎಸಿ ಅಧ್ಯಕ್ಷ ನಾದೆಂಡ್ಲ ಮನೋಹರ್ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!