ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ತಮಿಳು ನಟ ಪ್ರಭು, ಪ್ರಸ್ತುತ ಹೇಗಿದ್ದಾರೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ತಮಿಳು ನಟ ಪ್ರಭು ಕನ್ನಡ, ತೆಲುಗು, ಬಾಲಿವುಡ್‌ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿ ಹೆಚ್ಚು ಜನಪ್ರಿಯತೆ ಗಳಿಸಿದ್ದಾರೆ. ಸಾಲು ಸಾಲು ಚಿತ್ರಗಳನ್ನು ಮಾಡುತ್ತಾ ಪ್ರೇಕ್ಷಕರ ಮನಸೂರೆಗೊಳಿಸಿ ಇಂಡಸ್ಟ್ರಿಯಲ್ಲಿ ಬ್ಯುಸಿ ನಟ ಎನಿಸಿಕೊಂಡಿದ್ದಾರೆ. ತಂದೆ ಪಾತ್ರಗಳಲ್ಲಿ ಪ್ರಭು ಅವರಿಗೆ ಒಳ್ಳೆಯ ಕ್ರೇಜ್ ಇದೆ. ಇದೀಗ ಅನಾರೋಗ್ಯದಿಂದಾಗಿ ನಟ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಫೆಬ್ರವರಿ 20 ರಂದು ಹೊಟ್ಟೆ ನೋವಿನಿಂದಾಗಿ ಪ್ರಭು ಅವರನ್ನು ಚೆನ್ನೈನ ಮೆಡ್ವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರ ಮೂತ್ರಪಿಂಡದಲ್ಲಿ ಕಲ್ಲುಗಳನ್ನು ಕಂಡು ಲೇಸರ್ ಎಂಡೋಸ್ಕೋಪಿ ಮೂಲಕ ಹೊರತೆಗೆದಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಸ್ತುತ ಪ್ರಭು ಅವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅವರ ಅನಾರೋಗ್ಯದ ಬಗ್ಗೆ ತಿಳಿದ ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!