Tuesday, December 23, 2025

17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾದ ನಟ ಪ್ರಕಾಶ್ ರಾಜ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಚಲನಚಿತ್ರೋತ್ಸವ ಸಂಬಂಧಿತ ಸಭೆಯ ಬಳಿಕ ಮಾತನಾಡಿದ ಸಿಎಂ, ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯುವ ಈ ಅಂತಾರಾಷ್ಟ್ರೀಯ ಸಿನಿ ಹಬ್ಬಕ್ಕೆ ಪ್ರಕಾಶ್ ರಾಜ್ ಅವರ ಅನುಭವ ಮತ್ತು ಸಿನಿ ಜಗತ್ತಿನ ಕೊಡುಗೆ ಪ್ರೇರಣೆಯಾಗಲಿದೆ ಎಂದರು.

ಈ ಬಾರಿ ಚಲನಚಿತ್ರೋತ್ಸವಕ್ಕೆ ಭರ್ಜರಿ ಆರಂಭ ಸಿಗಲಿದ್ದು, ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಇದನ್ನು ಸ್ವತಃ ತಾವೇ ಉದ್ಘಾಟಿಸುವುದಾಗಿ ಸಿಎಂ ತಿಳಿಸಿದ್ದಾರೆ.

ಇತ್ತೀಚೆಗೆ ನಿಧನರಾದ ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್ ಸೇರಿದಂತೆ ಹಲವು ಗಣ್ಯರಿಗೆ ಶ್ರದ್ಧಾಂಜಲಿ ಹಾಗೂ ಸ್ಮರಣಾರ್ಥ ವಿಭಾಗದಲ್ಲಿ ಚಿತ್ರ ಪ್ರದರ್ಶನ ನಡೆಯಲಿದೆ. ಮಹಿಳಾ ಸಬಲೀಕರಣ ಈ ವರ್ಷದ ಪ್ರಮುಖ ಥೀಮ್ ಆಗಿರಲಿದೆ ಎಂದು ಹೇಳಿದ್ದಾರೆ.

error: Content is protected !!