ಹೊಸದಿಗಂತ ಡಿಜಿಟಲ್ ಡೆಸ್ಕ್:
ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು, ನಟ ಪೃಥ್ವಿರಾಜ್ ಸುಕುಮಾರನ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೇರಳದ ಆರ್‌ಟಿಸಿ ಬಸ್‌ನಲ್ಲಿ ಚಿತ್ರದ ಅದ್ಧೂರಿ ಆಕ್ಷನ್ ಸೀಕ್ವೆನ್ಸ್ ಚಿತ್ರೀಕರಣ ನಡೀತಿತ್ತು. ಈ ವೇಳೆ ಪೃಥ್ವಿರಾಜ್ ಬಸ್‌ನಿಂದ ಜಾರಿ ಬಿದಿದ್ದಾರೆ. ಮರಯೂರು ಬಸ್ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ. ತಕ್ಷಣ ಪೃಥ್ವಿರಾಜ್ ಅವರನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪರೀಕ್ಷೆ ನಡೆಸಿದ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದಾರೆ. ಇಂದು(ಜೂನ್ 26) ಪೃಥ್ವಿರಾಜ್ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ಗಾಯಗೊಂಡಿರುವ ಪೃಥ್ವಿರಾಜ್ ಅಭಿಮಾನಿಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
ಪೃಥ್ವಿರಾಜ್ ನಟನಾಗಿ ಮಾತ್ರವಲ್ಲದೇ ನಿರ್ದೇಶಕರಾಗಿ ನಿರ್ಮಾಪಕರಾಗಿ ಗುರ್ತಿಸಿಕೊಂಡಿದ್ದಾರೆ. ಪರಭಾಷಾ ಸಿನಿಮಾಗಳಲ್ಲೂ ಕೂಡ ಅವರು ನಟಿಸಿ ಪ್ರೇಕ್ಷಕರ ಮನಗೆದ್ದಿದ್ದಾರೆ.