ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ನಟ ಪುನೀತ್ ರಾಜಕುಮಾರ್ ಆರೋಗ್ಯದಲ್ಲಿ ಏರಪೇರಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಅವರು ಆಸ್ಪತ್ರೆಗೆ ತೆರಳಿದ್ದಾರೆ.
ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡುತ್ತಿದ್ದು, ಹಿರಿಯ ವೈದ್ಯರು ಹಾಗೂ ಕುಟುಂಬಸ್ಥರು ಅವರೊಟ್ಟಿಗಿರುವುದಾಗಿ ಮಾಹಿತಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.