ಕೋಟ ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿಗೆ ನಟ ರಮೇಶ್ ಅರವಿಂದ್​ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೋಟ ಗ್ರಾಮ ಪಂಚಾಯತ್, ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.) ಕೋಟದ ಸಹಭಾಗಿತ್ವದಲ್ಲಿ ಕಳೆದ ಹದಿನೇಳು ವರ್ಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡುತ್ತಾ ಬರುತ್ತಿರುವ ಡಾ. ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ ಪುರಸ್ಕಾರ ಈ ಬಾರಿ ಚಿತ್ರರಂಗ ಮತ್ತು ಸಮಾಜಕ್ಕೆ ನಟ ರಮೇಶ್ ಅರವಿಂದ್ ಅವರ ಪಾಲಿಗೆ ಒದಗಿ ಬಂದಿದೆ.
ಕೋಟ ಶಿವರಾಮ ಕಾರಂತ ಹುಟ್ಟೂರು ಪ್ರಶಸ್ತಿ 2022ಕ್ಕೆ ಹಲವು ದಶಕಗಳಿಂದ ಚಲನಚಿತ್ರ ಹಾಗೂ ಸಾಮಾಜಿಕ ಮಾಧ್ಯಮ ಕ್ಷೇತ್ರದಲ್ಲಿ ನಟ, ನಿರ್ದೇಶಕ, ನಿರೂಪಕ, ವ್ಯಕ್ತಿತ್ವ ವಿಕಸನ ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿ ಕೀರ್ತಿ ಗಳಿಸಿದ ಡಾ. ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ.
ಅಕ್ಟೋಬರ್ 10ರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನ ಹಿನ್ನೆಲೆ ಈ ಪ್ರಶಸ್ತಿಯನ್ನು ರಮೇಶ್ ಅವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!