ಕೊಲ್ಲೂರು ದೇಗುಲದಲ್ಲಿ ಸಿಎಂ ಜೊತೆ ನಟ ರಿಷಬ್ ಶೆಟ್ಟಿ: ಈ ಕುರಿತು ಬೊಮ್ಮಾಯಿ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಟ ರಿಷಬ್ ಶೆಟ್ಟಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಿಕ್ಕಿದ್ದು ಕೋ ಇನ್ಸಿಡೆಂಸ್,ಯಾವುದು ಪೂರ್ವ ನಿರ್ಧರಿತ ಆಗಿರಲಿಲ್ಲ. ನಾನು ಬರುವ ಮೊದಲೇ ರಿಷಬ್ ಶೆಟ್ಟಿ ದೇವಸ್ಥಾನದಲ್ಲಿ ಇದ್ದರು. ನಾವು ಜೊತೆಗೆ ಹೋಗಿ ದೇವರಿಗೆ ಪೂಜೆಯನ್ನು ಸಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಗುರುವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರುಶನ ಪಡೆದ ಬಳಿಕ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ನಮ್ಮ ಸಿದ್ದಾಂತಕ್ಕೂ ಅವರ ಸಿದ್ಧಾಂತಕ್ಕೂ ಬಹಳ ಸಾಮ್ಯತೆ ಇದೆ. ಈ ಹಿಂದೆ ಕೂಡ ಅವರು ನಮ್ಮ ಸಿದ್ದಾಂತವನ್ನು ಪ್ರಬಲವಾಗಿ ಪ್ರತಿಪಾದನೆ ಮಾಡಿದ್ದಾರೆ. ರಿಷಬ್ ಶೆಟ್ಟಿಯ ವಿಚಾರಗಳು ಹಾಗೆ ಇದೆ.ಅದನ್ನು ಆಗಾಗ ಅವರು ಪ್ರಕಟಣೆ ಮಾಡಿದ್ದಾರೆ.

ಬಿಜೆಪಿ, ನಾಯಕತ್ವದ ಬಗ್ಗೆ ಅವರು ಒಲವಿರುವ ಮಾತುಗಳಾಡಿದರು, ಈವರೆಗೆ ಯಾವುದೇ ಮಾತುಕತೆಗಳು ನಮ್ಮ ನಡುವೆ ನಡೆದಿಲ್ಲ. ಮುಂದೆ ಮೂಕಾಂಬಿಕೆ ಏನು ಆಶೀರ್ವಾದ ಕೊಡುತ್ತಾಳೆ ನೋಡೋಣ ಎಂದು ಹೇಳಿದರು.

ಎಂ.ಪಿ ಕುಮಾರಸ್ವಾಮಿ ರಾಜೀನಾಮೆ 
ಈಗಾಗಲೇ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಲಾಗಿದ್ದು, ಸರ್ವೆ ರಿಪೋರ್ಟ್ ಆಧಾರದಲ್ಲಿ ಹೀಗೆ ಆಗಿದೆ. ಮೂರು ಬಾರಿ ಶಾಸಕರಾಗಿದ್ದವರು, ಅವರ ಬಳಿ ಮಾತನಾಡಿ ಉಳಿಸಿಕೊಳ್ಳಲು ಪ್ರಯತ್ನ ಮಾಡುತ್ತೇವೆ.

ಉಡುಪಿಯಲ್ಲಿ ಹೊಸ ಅಭ್ಯರ್ಥಿ
ಉಡುಪಿಯ ನಾಲ್ಕು ಕ್ಷೇತ್ರಗಳಿಗೆ ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇದು ಪ್ರಯೋಗ ಅಲ್ಲ, ರಿಸ್ಕ್ ಅಲ್ಲ. ಈಗ ಇರುವವರು ಪ್ರಬಲ ಸಂಘಟನೆಯಿಂದ ಬಂದವರಾಗಿದ್ದು, ಸಂಘಟನೆಯಲ್ಲಿ ಪ್ರಬಲವಾಗಿ ಅತ್ಯಂತ ಗಟ್ಟಿ ಇರುವವರನ್ನು ಆಯ್ಕೆ ಮಾಡಿದ್ದೇವೆ ಎಂದರು.

ಸಿಎಂ ಭೇಟಿಯ ವೇಳೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಕೊಲ್ಲೂರು ದೇಗುಲದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ, ಟ್ರಸ್ಟ್ ಸಂಧ್ಯಾ ರಮೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!