ಹೊಸದಿಗಂತ ವರದಿ, ಉಡುಪಿ:
ಸೋಮವಾರ ಚಿತ್ರ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮುಡಿಅಕ್ಕಿ ಕಡಬು ಸೇವೆ ನೀಡಿ ವಿಶೇಷ ಪೂಜೆ ಸಲ್ಲಿಸಿದ ರಿಷಬ್ ಅವರನ್ನು ದೇವಸ್ಥಾನದ ವತಿಯಿಂದ ಹಿರಿಯ ಮೊಕ್ತೇಸರ ಕೆ.ಸೂರ್ಯನಾರಾಯಣ ಉಪಾಧ್ಯಾಯ ಗೌರವಿಸಿದರು. ಈ ಸಂದರ್ಭ ಪತ್ನಿ ಪ್ರಗತಿ ಶೆಟ್ಟಿ, ಮಕ್ಕಳಾದ ರಣ್ವಿತ್ ಶೆಟ್ಟಿ, ರಾಧ್ಯಾ ಶೆಟ್ಟಿ ಹಾಗೂ ಕುಟುಂಬ ಸದಸ್ಯರು ಇದ್ದರು.