ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರಾಗಿ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ಅವರನ್ನು ಆಯ್ಕೆ ಮಾಡಲಾಗಿದೆ.
ನಿಗಮ ಮಂಡಳಿಗೆ ಸಿಎಂ ಸಿದ್ದರಾಮಯ್ಯ 44 ಜನರನ್ನು ನೇಮಕ ಮಾಡಿದ್ದು, ಅದರಲ್ಲಿ ಚಲನಚಿತ್ರ ಅಕಾಡೆಮಿ ಸೇರಿದೆ.
ಹಾಸ್ಯ ನಟರಾಗಿ, ಸಂಗೀತ ನಿರ್ದೇಶಕರಾಗಿ ಸಾಕಷ್ಟು ಸಿನಿಮಾಗಳಿಗೆ ಕೆಲಸ ಮಾಡಿರುವ ಸಾಧು ಕೋಕಿಲಾ, ನಿರ್ಮಾಪಕರಾಗಿ, ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ಕಿರುತೆರೆ, ಹಿರಿತೆರೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಈ ಆಯ್ಕೆ ಸೂಕ್ತ ಎನ್ನುವುದು ಹಲವರ ಅಭಿಪ್ರಾಯವಾಗಿದೆ.