ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ಸೋಮವಾರ ಶೋಧ ಕಾರ್ಯಾಚರಣೆ ನಡೆಸಿದ ಮುಂಬೈ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.
ದಾಳಿಗೆ ಸಂಬಂಧಿಸಿದಂತೆ ಈ ಹಿಂದೆ ಮುಂಬೈನಲ್ಲಿ ಬಂಧನಕ್ಕೊಳಗಾಗಿದ್ದ ಬಾಂಗ್ಲಾದೇಶದ ಪ್ರಜೆ ಬಳಸಿದ ಸಿಮ್ ಮಹಿಳೆಯ ಹೆಸರಿನಲ್ಲಿ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
ಭಾನುವಾರ ಪಶ್ಚಿಮ ಬಂಗಾಳಕ್ಕೆ ಆಗಮಿಸಿದ ಮುಂಬೈ ಪೊಲೀಸರ ಇಬ್ಬರು ಸದಸ್ಯರ ತಂಡ ಮಹಿಳೆಯೊಬ್ಬರನ್ನು ನಾಡಿಯಾ ಜಿಲ್ಲೆಯ ಚಾಪ್ರಾದಿಂದ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಮುಂಬೈಗೆ ಕರೆದೊಯ್ಯಲು ಟ್ರಾನ್ಸಿಟ್ ರಿಮಾಂಡ್‌ಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಪಶ್ಚಿಮ ಬಂಗಾಳ ಪೊಲೀಸ್ ಮೂಲಗಳು ತಿಳಿಸಿವೆ.
ಬಂಧಿತ ಮಹಿಳೆಯನ್ನು ಖುಖುಮೋನಿ ಜಹಾಂಗೀರ್ ಶೇಖ್ ಎಂದು ಗುರುತಿಸಲಾಗಿದೆ. ಈಕೆ ಬಾಂಗ್ಲಾದೇಶಿ ಶರೀಫುಲ್ ಫಕೀರ್‌ಗೆ ಪರಿಚಿತರಾಗಿದ್ದರು ಎನ್ನಲಾಗಿದೆ.