ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಕುರಿತು ಮೌನ ಮುರಿದ ಬಾಲಿವುಡ್ ನಟ ಸಲ್ಮಾನ್ ಖಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟ ಸಲ್ಮಾನ್ ಖಾನ್ ‘ಸಿಕಂದರ್’ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದು, ಈ ವೇಳೆ ಯ ಬಗ್ಗೆ ಮಾತನಾಡಿದ್ದಾರೆ.

ನನಗೆ ಅದಷ್ಟೇ ಭದ್ರತೆ ಇದ್ದರೂ ಕೆಲವೊಂದು ಸಮಯದಲ್ಲಿ ನನ್ನನ್ನು ರಕ್ಷಿಸುವುದು ಸುಲಭದ ಮಾತಲ್ಲ, ನನ್ನ ಭವಿಷ್ಯ ದೇವರ ಕೈಯಲ್ಲಿದೆ. ಎಲ್ಲವೂ ದೇವರಿಗೆ ಬಿಟ್ಟಿದ್ದೇನೆ. ಎಲ್ಲಿಯವರೆಗೆ ಜೀವ ಇರುತ್ತದೋ, ಅಲ್ಲಿಯವರೆಗೆ ಮಾತ್ರ ಈ ಬದುಕು ಅಷ್ಟೇ ಎಂದಿದ್ದಾರೆ.

ಪ್ರತಿದಿನ ಭದ್ರತೆಯೊಂದಿಗೆ ಓಡಾಡುವುದು, ದಿನಚರಿ ಕೆಲಸಗಳಿಗೆ ಹಾಗೂ ಜನರೊಂದಿಗೆ ತಿರುಗಾಡುವುದು ಕೂಡ ಕಷ್ಟ ಎಂದು ಮುಕ್ತವಾಗಿ ಸಲ್ಮಾನ್‌ ಮಾತನಾಡಿದ್ದಾರೆ.

ಅಂದಹಾಗೆ, ರಶ್ಮಿಕಾ ಮಂದಣ್ಣ ಜೊತೆಗಿನ ಸಲ್ಮಾನ್ ‘ಸಿಕಂದರ್’ ಸಿನಿಮಾ ಇದೇ ಮಾ.30ರಂದು ರಿಲೀಸ್ ಆಗ್ತಿದೆ. ಈ ಚಿತ್ರವನ್ನು ಎ.ಆರ್ ಮುರುಗದಾಸ್ ನಿರ್ದೇಶನ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!