ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದ ಸ್ಯಾಂಡಲ್ ವುಡ್ ನಟ, ರಾಷ್ಟ್ರಪ್ರಶಸ್ತಿ ವಿಜೇತ ಸಂಚಾರಿ ವಿಜಯ್(38) ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಪಂಚನಹಳ್ಳಿಯಲ್ಲಿ ನೆರವೇರಿಸಲಾಯಿತು.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲುಕಿನ ಪಂಚನಹಳ್ಳಿಯಲ್ಲಿ ವಿಜಯ್ ಸ್ನೇಹಿತ ರಘು ಅವರ ತೋಟದಲ್ಲಿ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆ ನೆರವೇರಿತು. ಕುಪ್ಪೂರು ಯತೀಶ್ವರ ಶಿವಾಚಾರ್ಯ ಶ್ರಿಗಳ ನೇತೃತ್ವದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಹೋದರ ಸಿದ್ದೇಶ್ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಪೊಲೀಸರಿಂದ ಮೂರು ಸುತ್ತು ಕುಶಲತೋಪು ಹಾರಿಸಿ ಗೌರವ ಸಲ್ಲಿಸಲಾಯಿತು.
ವಿಜಯ್ ಪಾರ್ಥೀವ ಶರೀರವನ್ನು ಸಮಾಧಿ ಸ್ಥಳದಲ್ಲಿರಿಸಿ ಲಿಂಗಾಯತ ಸಂಪ್ರದಾಯದಂತೆ ಬಿಲ್ವಪತ್ರೆ, ವಿಭೂತಿಗಳನ್ನು ಬಳಸಿ, ಮಣ್ಣಿನಿಂದ ಪಾರ್ಥೀವ ಶರೀರವನ್ನು ಮುಚ್ಚಿ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು. ಅಂತ್ಯಕ್ರಿಯೆಯಲ್ಲಿ ಸಚಿವ ಮಾಧುಸ್ವಾಮಿ, ಕಡೂರು ಮಾಜಿ ಶಾಸಕ ವೈ ಎಸ್ ವಿ ದತ್ತಾ ಹಾಗೂ ಕುಟುಂಬದ ಆಪ್ತರು, ಊರವರು ಭಾಗಿಯಾಗಿದ್ದರು.