ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಿಂದ 28 ಮಂದಿ ಅಮಾಯಕರು ಜೀವ ಕಳೆದುಕೊಂಡಿದ್ದಾರೆ. ಉಗ್ರರ ದಾಳಿಗೆ ದೇಶದೆಲ್ಲೆಡೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಸೆಲೆಬ್ರಿಟಿಗಳು ಕೂಡ ಪಹಲ್ಗಾಮ್ ದಾಳಿಯನ್ನು ಖಂಡಿಸಿದ್ದಾರೆ.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ನಟ ಶಾರುಖ್ ಖಾನ್ ಪ್ರತಿಕ್ರಿಯಿಸಿದ್ದಾರೆ. ‘ಪಹಲ್ಗಾಮ್‌ನಲ್ಲಿ ನಡೆದಿರುವ ವಿಶ್ವಾಸಘಾತುಕ ಕೃತ್ಯ ಮತ್ತು ಅಮಾನವೀಯ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳು ಸಾಲದು. ಇಂತಹ ಸಮಯದಲ್ಲಿ, ನಾವು ದೇವರ ಕಡೆಗೆ ನೋಡಿ, ಸಂತ್ರಸ್ತ ಕುಟುಂಬಗಳಿಗಾಗಿ ಪ್ರಾರ್ಥಿಸಬಹುದು. ಒಂದು ರಾಷ್ಟ್ರವಾಗಿ ನಾವು ಒಗ್ಗಟ್ಟಿನಿಂದ ಬಲವಾಗಿ ನಿಂತು ಈ ಘೋರ ಕೃತ್ಯದ ವಿರುದ್ಧ ನ್ಯಾಯವನ್ನು ಪಡೆಯೋಣ’ ಎಂದು ಶಾರುಖ್ ಖಾನ್ ತಮ್ಮ ಸಾಮಾಜಿಕ ಮಾದ್ಯಮದಲ್ಲಿ ಬರೆದುಕೊಂಡಿದ್ದಾರೆ.