ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲಯಾಳಂ ಶೈನ್ ಟಾಮ್ ಚಾಕೋ ಅವರನ್ನು ಶನಿವಾರ (ಏಪ್ರಿಲ್ 19) ಬಂಧಿಸಲಾಯಿತು. ಆದರೆ ಕೆಲವೇ ಗಂಟೆಗಳಲ್ಲಿ ಅವರು ಜಾಮೀನು ಪಡೆದು ಹೊರಗೆ ಬಂದಿದ್ದಾರೆ.
ಡ್ರಗ್ಸ್ ಬಳಕೆ ಮಾತ್ರವಲ್ಲದೇ ನಟಿಯ ಜೊತೆ ಅನುಚಿತವಾಗಿ ವರ್ತಿಸಿದ ಆರೋಪ ಕೂಡ ಶೈನ್ ಟಾಮ್ ಚಾಕೋ ಮೇಲಿದೆ.
ಶೂಟಿಂಗ್ ವೇಳೆ ಶೈನ್ ಟಾಮ್ ಚಾಕೋ ಅವರು ಮಾದಕ ವಸ್ತು ಸೇವನೆ ಮಾಡುತ್ತಾರೆ ಎಂದು ಪೊಲೀಸರಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ, ಶೈನ್ ಟಾಮ್ ಚಾಕೋ ಉಳಿದುಕೊಂಡಿದ್ದ ಹೋಟೆಲ್ ಮೇಲೆ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಅವರು ಪೊಲೀಸರ ಕೈಗೆ ಸಿಗದೇ ಪರಾರಿ ಆಗಿದ್ದರು. ಅವರು ಓಡಿಹೋದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆ ಬಳಿಕ ನಟನಿಗೆ ನೋಟಿಸ್ ನೀಡಲಾಗಿತ್ತು.ಕೊಚ್ಚಿ ನಗರ ಪೊಲೀಸರು ಶೈನ್ ಟಾಮ್ ಚಾಕೋ ಅವರನ್ನು ಬಂಧಿಸಿದರು.
2002ರಿಂದಲೂ ಶೈನ್ ಟಾಮ್ ಚಾಕೋ ಅವರು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಹಲವಾರು ಹಿಟ್ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಮಲಯಾಳಂ ಚಿತ್ರರಂಗ ಮಾತ್ರವಲ್ಲದೇ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲೂ ನಟಿಸಿ ಫೇಮಸ್ ಆಗಿದ್ದಾರೆ. ವಿಲನ್ ಪಾತ್ರಗಳಲ್ಲಿ ಅವರು ಮಿಂಚಿದ್ದಾರೆ.