ಸೊರಬದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಪರ ಇಂದು ನಟ ಶಿವಣ್ಣ ಪ್ರಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕು ಆನವಟ್ಟಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಪರ ನಟ ಶಿವರಾಜ್‌ಕುಮಾರ್‌ ಹಾಗೂ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್‌ ರೋಡ್‌ ಶೋ ನಡೆಸಲಿದ್ದಾರೆ.

ಗೀತಾ ಶಿವರಾಜ್‌ಕುಮಾರ್‌ ಈಗಾಗಲೇ ಕಾಂಗ್ರೆಸ್‌ ಸೇರ್ಪಡೆಗೊಂಡಿದ್ದು, ಅಭ್ಯರ್ಥಿ ಮಧು ಬಂಗಾರಪ್ಪ ಪರ ಪ್ರಚಾರ ಕೈಗೊಂಡಿದ್ದಾರೆ. ನಟ ಶಿವರಾಜ್‌ ಕುಮಾರ್‌ ಕೂಡ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಸೊರಬ ತಾಲೂಕಿನ ಆನವಟ್ಟಿಯಲ್ಲಿ ಇಂದು ಮಧ್ಯಾಹ್ನ ರೋಡ್‌ ಶೋ ನಡೆಯಲಿದೆ. ಎರಡು ಕಿಲೋಮೀಟರ್‌ ರೋಡ್‌ ಶೋ ನಡೆಯಲಿದ್ದು, ಸಂಜೆ ಆನವಟ್ಟಿ ಸರಕಾರಿ ಪ್ರೌಢಶಾಲೆ ಮೈದಾನದಲ್ಲಿ ಬಹಿರಂಗ ಸಮಾವೇಶ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!