ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ನಟ ಶಿವರಾಜ್‌ಕುಮಾರ್‌, ಶೀಘ್ರದಲ್ಲೇ ಬೆಂಗಳೂರಿಗೆ ಆಗಮನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಇತ್ತೀಚೆಗಷ್ಟೇ ಕ್ಯಾನ್ಸರ್ ಸರ್ಜರಿಗೆ ಒಳಗಾಗಿದ್ದ ಖ್ಯಾತ ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ಸಿನ ಬೆನ್ನಲ್ಲೇ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಅಮೇರಿಕಾದಲ್ಲಿ ಕ್ಯಾನ್ಸರ್‌ ಚಿಕಿತ್ಸೆಗೆ ಒಳಗಾಗಿದ್ದು, ಇತ್ತೀಚೆಗೆ ಸರ್ಜರಿ ಕೂಡ ಸಕ್ಸಸ್‌ ಆಗಿತ್ತು. ಈ ಬಗ್ಗೆ ವಿಡಿಯೋ ಹಂಚಿಕೊಂಡಿದ್ದ ಶಿವಣ್ಣ ನಾನು ಆರೋಗ್ಯವಾಗಿದ್ದೇನೆ. ಆದಷ್ಟು ಬೇಗ ನಿಮ್ಮ ಮುಂದೆ ಬರುತ್ತೇನೆ ಎಂದಿದ್ದರು. ಇದೀಗ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದು, ಶೀಘ್ರದಲ್ಲೇ ಬೆಂಗಳೂರಿಗೆ ಅಗಮಿಸಲಿದ್ದಾರೆ ಎನ್ನಲಾಗಿದೆ.

ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಇನ್ಸ್‌ಟಿಟ್ಯೂಟ್‌ನಲ್ಲಿ ಶಿವಣ್ಣ ಅವರಿಗೆ ಇತ್ತೀಚೆಗೆ ಸರ್ಜರಿ ನಡೆದಿತ್ತು. ಬಳಿಕ ಅವರಿಗೆ ಎರಡು ಬಾರಿ ಮೆಡಿಕಲ್‌ ಚೆಕಪ್‌ ಆಗಿತ್ತು. ಇದೀಗ ಈ ಪ್ರಕ್ರಿಯೆ ಕೂಡ ಪೂರ್ಣಗೊಂಡಿದ್ದು, ಶಿವಣ್ಣ ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದಾರೆ. ಹೀಗಾಗಿ ಶಿವಣ್ಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸದ್ಯ ಈ ತಿಂಗಳ ಕೊನೆಯ ವಾರದವರೆಗೂ ಶಿವಣ್ಣ ಅಮೇರಿಕಾದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಜನವರಿ 24ರ ಬಳಿಕ ಅವರು ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!